ಕರ್ನಾಟಕ

karnataka

ETV Bharat / city

ಶೇ. 50 ರಷ್ಟು ಪ್ರಯಾಣಿಕ ವಾಹನಗಳಿಗೆ ತೆರಿಗೆ ವಿನಾಯಿತಿ: ಡಿಸಿಎಂ ಸವದಿ - ಸಾರಿಗೆ ಸಚಿವ ಲಕ್ಷ್ಮಣ ಸವದಿ ಆದೇಶ

ರಾಜ್ಯದಲ್ಲಿ ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ, ಇನ್ನುಳಿದ ನೋಂದಾಯಿಸಿರುವ ಎಲ್ಲ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ, ಜೂನ್ 2021ರ ತಿಂಗಳಿಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇ. 50 ರಷ್ಟಕ್ಕೆ ವಿನಾಯಿತಿ ನೀಡಿ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಆದೇಶ ಹೊರಡಿಸಿದ್ದಾರೆ.‌

dcm-savadi-said-
ಡಿಸಿಎಂ ಸವದಿ

By

Published : Jun 23, 2021, 7:55 PM IST

ಬೆಂಗಳೂರು:ಕೋವಿಡ್-19 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಲಾಗಿದೆ.

ಕೋವಿಡ್‌ನ ಸಂಕಷ್ಟಗಳನ್ನ ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ, ಇನ್ನುಳಿದ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ , ಜೂನ್ 2021ರ ತಿಂಗಳಿಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇ. 50 ರಷ್ಟಕ್ಕೆ ವಿನಾಯಿತಿ ನೀಡಿ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಆದೇಶ ಹೊರಡಿಸಿದ್ದಾರೆ.‌

ABOUT THE AUTHOR

...view details