ಕರ್ನಾಟಕ

karnataka

ETV Bharat / city

ಸಾಧನೆಗೈದ ವಸತಿ ಶಾಲೆಗಳ ಪಿಯು ವಿದ್ಯಾರ್ಥಿಗಳಿಗೆ ಡಿಸಿಎಂ ಅಭಿನಂದನೆ - DCM karnataka

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ 66 ವಸತಿ ಶಾಲೆಗಳ 2,963 ಪಿಯುಸಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ಶೇ. 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

DCM
ಡಿಸಿಎಂ ಗೋವಿಂದ ಕಾರಜೋಳ

By

Published : Jul 15, 2020, 12:35 AM IST

ಬೆಂಗಳೂರು:ಕೊರೊನಾ ಸೋಂಕಿನ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಅತ್ಯುತ್ತಮವಾಗಿ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಶೇ. 75.3ರಷ್ಟು ಪಿಯುಸಿ ವಿದ್ಯಾರ್ಥಿಗಳು ಉನ್ನತ ಶ್ರೇಣಿ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ 66 ವಸತಿ ಶಾಲೆಗಳ 2,963 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ಶೇ. 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 1,809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 289 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ. 76.4ರಷ್ಟು ಫಲಿತಾಂಶ ಬಂದಿತ್ತು. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾರಜೋಳ ಶುಭ ಹಾರೈಕೆ ತಿಳಿಸಿದ್ದಾರೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಧೈರ್ಯಗೆಡಬಾರದು, ಇಲಾಖೆಯು ತಮ್ಮೊಂದಿಗೆ ಇದ್ದು, ಆನ್​ಲೈನ್ ತರಬೇತಿ‌ ನೀಡುವ ಮೂಲಕ ಪೂರಕ ಪರೀಕ್ಷೆಗೆ ತಯಾರಿ ಮಾಡಲಿದೆ. ಮರಳಿ ಶ್ರಮಿಸುವ ಮೂಲಕ ಯಶಸ್ವಿಯಾಗಬೇಕು ಎಂದು ಅವರು ಕರೆ ನೀಡಿದರು.

ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯು ಮುಂಜಾಗ್ರತಾ ಕ್ರಮ ಕೈಗೊಂಡು ಶಿಕ್ಷಕರು, ವಿದ್ಯಾರ್ಥಿಗಳು ಸೂಕ್ತ ನಿರ್ದೇಶನಗಳನ್ನು ಪಾಲಿಸುವಂತೆ ಮಾಡಿ, ಪಿಯುಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಮೌಲ್ಯಮಾಪನವನ್ನು ಬೇಗ ಮುಗಿಸಿ ಶೀಘ್ರವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿದ್ದಾರೆ. ಅವರನ್ನು ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ ಅವರ ನಿರಂತರ ಮೇಲ್ವಿಚಾರಣೆ, ಸೂಕ್ತ ನಿರ್ದೇಶನಗಳಿಂದ ವಸತಿ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸುಲಲಿತ ಹಾಗೂ ಸುರಕ್ಷಿತವಾಗಿ ಪರೀಕ್ಷೆ ಬರೆದು ಅತ್ಯುತ್ತಮವಾದ ಫಲಿತಾಂಶ ಪಡೆದಿದ್ದಾರೆ. ಅವಿರತವಾಗಿ ಶ್ರಮಿಸಿದ ಈ ಇಬ್ಬರು ಹಿರಿಯ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.

ABOUT THE AUTHOR

...view details