ಬೆಂಗಳೂರು:ಕರ್ನಾಟಕ ಪೊಲೀಸ್ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧೆಡೆ ಖಾಲಿಯಿರುವ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯ ಆಹ್ವಾನಿಸಲಾಗಿತ್ತು. ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 7ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿ ಬಹುತೇಕ ಸಮಯ ಲಾಕ್‌ಡೌನ್ ಇದ್ದಿದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಜುಲೈ 20ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿವರ
ಹುದ್ದೆಗಳ ಸಂಖ್ಯೆ: 84 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ. 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.