ಕರ್ನಾಟಕ

karnataka

ETV Bharat / city

ಪ್ಲಾಸ್ಟಿಕ್ ನಿಷೇಧ ಜಾರಿಗೆ ಸೆಪ್ಟೆಂಬರ್​ 1 ಡೆಡ್​ಲೈನ್​​ - undefined

ಸೆಪ್ಟೆಂಬರ್ 1ರೊಳಗೆ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ತರದೇ ಇದ್ದರೇ ಬಿಬಿಎಂಪಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್​ಜಿಟಿ) ವರದಿ ನೀಡುತ್ತೇವೆ ಎಂದು ರಾಜ್ಯ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಆಡಿ ಎಚ್ಚರಿಕೆ ನೀಡಿದರು.

'ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ' ಕಾರ್ಯಕ್ರಮವನ್ನು ಮೇಯರ್ ಗಂಗಾಂಬಿಕೆ ಅವರು ಉದ್ಘಾಟಿಸಿದರು.

By

Published : Jul 21, 2019, 8:30 PM IST

ಬೆಂಗಳೂರು:ಪುರಭವನದಲ್ಲಿ ಇಂದು ಆಯೋಜಿಸಿದ್ದ 'ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ' ಕಾರ್ಯಕ್ರಮದಲ್ಲಿ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಆಡಿ ಮಾತನಾಡಿದರು.

ಬೈಲಾದಲ್ಲಿ ಕೆಲವು ನಿಯಮಗಳನ್ನು ಮಾರ್ಪಾಡುಗೊಳಿಸಿ ದುಪ್ಪಟ್ಟು ದಂಡ ವಿಧಿಸುವ ಮೂಲಕ ಪ್ಲಾಸ್ಟಿಕ್​ಗೆ ನಿಷೇಧ ಹೇರಬೇಕು. ಅದು ಸೆ.1ರೊಳಗೆ ಜಾರಿಯಾಗಬೇಕು ಎಂದು ಮೇಯರ್​ಗೆ ಸೂಚಿಸಿದರು.

ಮನೆಯಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಬೇಕು. ಅನುಕರಣೆ ಮಾಡದವರಿಗೆ ದುಪ್ಪಟ್ಟು ದಂಡ ವಿಧಿಸಬೇಕು. ದೇಶದಲ್ಲಿ ಪ್ರತಿನಿತ್ಯ 1.50 ಲಕ್ಷ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಹೀಗೆ ಮುಂದುವರಿದರೆ 3 ಲಕ್ಷ ಮುಟ್ಟುತ್ತದೆ. ಬೆಂಗಳೂರಿನಲ್ಲಿ 5,700 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದೆ. ಬಹುತೇಕ ಕಸವನ್ನು ಕ್ವಾರಿಗಳಿಗೆ ಸುರಿಯುತ್ತಿದ್ದಾರೆ. ಇದು ಪರಿಸರದ ಮತ್ತು ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೇಯರ್ ಗಂಗಾಂಬಿಕೆ ಮಾತನಾಡಿ, ನಗರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈ ಜೋಡಿಸಿದಾಗ ಮಾತ್ರ ಘನತ್ಯಾಜ್ಯ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು. ತ್ಯಾಜ್ಯ ವಿಲೇವಾರಿಗೆ ಪಾಲಿಕೆ ಸೆಪ್ಟೆಂಬರ್ 1ರಿಂದ ಹೊಸ ಟೆಂಡರ್ ಜಾರಿಗೊಳಿಸುತ್ತಿದೆ ಎಂದರು.

ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ಕೊಡದಿದ್ದಲ್ಲಿ ದುಪಟ್ಟು ದಂಡ ವಿಧಿಸಲಾಗುತ್ತದೆ. ನಗರದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಬಿಬಿಎಂಪಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಅದಕ್ಕಾಗಿ ಕಾನೂನಿನಲ್ಲಿ ಕೆಲವು ಮಾರ್ಪಾಡು ಮಾಡಲಾಗುತ್ತಿದೆ. ಆಗಸ್ಟ್ 1ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದು ಕಂಡು ಬಂದರೆ 5 ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

For All Latest Updates

TAGGED:

ABOUT THE AUTHOR

...view details