ಬೆಂಗಳೂರು :ಕೋವಿಡ್ 3ನೇ ಅಲೆಯ ಕುರಿತು ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿರುವ ಡಾ. ದೇವಿಶೆಟ್ಟಿ ವರದಿಯು ತಮ್ಮ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
ತರಗತಿ ಕಲಿಕೆಯ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿಯಷ್ಟೇ ನೋಡಿದ್ದೇನೆ. ವರದಿ ತಮ್ಮ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಿಯಿಸಲು ಸಾಧ್ಯ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ.