ಕರ್ನಾಟಕ

karnataka

ETV Bharat / city

ದೀಪಾವಳಿ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ! - ಕರ್ನಾಟಕ ಸರ್ಕಾರದ ದೀಪಾವಳಿ ಮಾರ್ಗಸೂಚಿ

ಕೋವಿಡ್ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬ ಆಚರಣೆಗೆ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನುನೂ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ.

Deepavali celebration: Govt released new guidelines
ದೀಪಾವಳಿ ಹಬ್ಬ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ

By

Published : Nov 8, 2020, 12:17 AM IST


ಬೆಂಗಳೂರು: ದೀಪಾವಳಿ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳಲ್ಲಿ ಅನುಮತಿಸಿರುವ 'ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಸಿಡಿಸುವ ಹಾಗಿಲ್ಲ. ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು 'ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ದೀಪಾವಳಿ ಹಬ್ಬ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಐಪಿಸಿ 188ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ದೀಪಾವಳಿ ಹಬ್ಬ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ
ಮಾರ್ಗಸೂಚಿಯಲ್ಲಿ ಏನಿದೆ?:- ಹಸಿರು‌ ಪಟಾಕಿ ಮಾರಾಟ ಮಳಿಗೆಯನ್ನು ನ.7 ರಿಂದ ನ.16 ವರೆಗೆ ಮಾತ್ರ ತೆರೆಯಬೇಕು.- ಪರವಾನಗಿದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ 'ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಬೇರೆ ಸ್ಥಳಗಳಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.- ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ 'ಹಸಿರು ಪಟಾಕಿ' ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಅನುಮತಿಸಬೇಕು- ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಳಿಗೆಗಳ‌ ಮಧ್ಯೆ 6‌ ಮೀಟರ್ ಅಂತರವಿರಬೇಕು.- ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.- 'ಹಸಿರು ಪಟಾಕಿ'ಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.- 'ಹಸಿರು ಪಟಾಕಿ'ಗಳ ಖರೀದಿಯ ಸಂದರ್ಭದಲ್ಲಿ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.

ABOUT THE AUTHOR

...view details