ಕರ್ನಾಟಕ

karnataka

ETV Bharat / city

ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? : ಸಂಪುಟ ವಿಸ್ತರಣೆ ವಿಳಂಬಕ್ಕೆ ಸಿದ್ದು ತರಾಟೆ - ಸಿದ್ದರಾಮಯ್ಯ ಟ್ವೀಟ್​​

ದಿನದಿಂದ ದಿನಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿವುದಕ್ಕೆ ಸಿದ್ದರಾಮಯ್ಯ ಟ್ವೀಟ್​​ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

By

Published : Aug 3, 2019, 12:38 PM IST

ಬೆಂಗಳೂರು:ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿರುವುದರ ವಿರುದ್ಧ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಖಾರವಾಗಿ ಪ್ರಶ್ನಿಸಿದ್ದಾರೆ.

ಮೂರು ಪ್ರತ್ಯೇಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ರಾಜ್ಯಪಾಲರು, ಇಬ್ಬರ ವಿರುದ್ಧವೂ ಕಿಡಿಕಾರಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಆಸಕ್ತಿಯನ್ನು ಬಿಎಸ್​​ವೈ ಹಾಗೂ ಬಿಜೆಪಿ, ಸಚಿವ ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಆಡಳಿತ ಯಂತ್ರ ಸ್ಥಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ..? ಏಕಚಕ್ರಾಧಿಪತ್ಯವೇ? ಎಂದು ತಮ್ಮ ಮೊದಲ ಟ್ವೀಟ್​​ನಲ್ಲಿ ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ಎರಡನೇ ಟ್ವೀಟ್​​ನಲ್ಲಿ ಅತಿವೃಷ್ಟಿ, ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ? ಸಂಪುಟ ವಿಸ್ತರಣೆಯದ್ದೇ ? ಎಂದು ಮುಖ್ಯಮಂತ್ರಿಗಳನ್ನ ಕೇಳಿದ್ದಾರೆ.

ಇನ್ನು ಮೂರನೇ ಟ್ವೀಟ್​​ನಲ್ಲಿ, ವಿಶ್ವಾಸಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ರಾಜ್ಯಪಾಲರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ABOUT THE AUTHOR

...view details