ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಇಂದು ಅರ್ಚಕರ ನಿಯೋಗ ಭೇಟಿಯಾಗಿದೆ. ರಾಜ್ಯದ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದೆ.
ಸದಾಶಿವ ನಗರದ ನಿವಾಸದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿ, ದೇವಸ್ಥಾನಗಳು ಸರ್ಕಾರದ ಸುಪರ್ದಿಯಲ್ಲೇ ಇರಬೇಕು. ಯಾವುದೇ ಕಾರಣಕ್ಕೂ ರಾಜ್ಯದ ದೇವಾಲಯಗಳನ್ನು ಖಾಸಗಿಯವರಿಗೆ ನೀಡಬಾರದು ಎಂದು ಈ ವಿಚಾರವಾಗಿ ಡಿ.ಕೆ ಶಿವಕುಮಾರ್ ಅವರ ಬೆಂಬಲ ಕೋರಿದರು.
ಮೇಕೆದಾಟು ಪಾದಯಾತ್ರೆಗೆ ಬೆಂಬಲ :ಇದೇ ವೇಳೆ ಮೇಕೆದಾಟು ಪಾದಯಾತ್ರೆಗೆ ಅರ್ಚಕರ ನಿಯೋಗ ಬೆಂಬಲ ಸೂಚಿಸಿದೆ. ಅರ್ಚಕರು ಒಂದು ದಿನದ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗುವ ಭರವಸೆ ನೀಡಿದರು.