ಬೆಂಗಳೂರು: ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಎಸ್ಟಿ ಸಮುದಾಯದ ಮುಖಂಡರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹಳೆ ಬಸ್ ನಿಲ್ಥಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜನಹಳ್ಳಿಯ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೇರೆ ರಾಜ್ಯಗಳಂತೆ ನಮ್ಮಲ್ಲೂ ಎಸ್ಟಿ ಸಮುದಾಯಕ್ಕೆ ಮೀಸಲು ಹೆಚ್ಚಿಸಬೇಕು: ನಟ ಶಶಿ ಕುಮಾರ್ - ರಾಜನಹಳ್ಳಿಯ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ
ಎಸ್ಟಿ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಸಮುದಾಯದ ಮುಖಂಡರು ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.
ಎಸ್ಟಿ ಸಮುದಾಯದ ಮೀಸಲಾತಿಯನ್ನ ಶೇ. 7.5ಕ್ಕೆ ಹೆಚ್ಚಿಸಬೇಕು. ಮೀಸಲಾತಿ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಅಂತ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ನಟ ಶಶಿಕುಮಾರ್, ಎಸ್ಟಿ ಸಮುದಾಯಕ್ಕೆ ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ಮೀಸಲಾತಿ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಮೀಸಲಾತಿ ಹೆಚ್ಚಿಸುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಕೂಡಲೇ ಮೀಸಲಾತಿ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಎಸ್ಟಿ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
TAGGED:
bengalore