ಬೆಂಗಳೂರು:ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಯನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಆಫ್‌ಲೈನ್ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ಡಿಸಿಎಂ ತಿಳಿಸಿದ್ದಾರೆ.
ಸ್ನಾತಕೋತ್ತರ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ:
ಆಯ್ಕೆ 1:ಭೌತಿಕ ತರಗತಿಗಳಿಗೆ ಹಾಜರಾಗುವುದು
* ಭೌತಿಕ ತರಗತಿಗಳನ್ನು ನವೆಂಬರ್ 17ರಿಂದ ಪ್ರಾರಂಭಿಸುವುದು. ಭೌತಿಕವಾಗಿ ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಪಡೆದು ಭೌತಿಕ ತರಗತಿಗಳನ್ನು ನಡೆಸುವುದು.
* ಭೌತಿಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧಪಡಿಸಿಕೊಳ್ಳುವುದು.
* ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ (shift system) ಮೇರೆಗೆ ನಡೆಸುವುದು.
ಆಯ್ಕೆ-2: ಆನ್‌ಲೈನ್ ತರಗತಿಗಳ ಮೂಲಕ ಅಭ್ಯಾಸ ಮಾಡುವುದು:
* ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು.
* ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯಕವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.
*ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಗ್ರಿಗಳನ್ನು ಪ್ರತಿ Period/ Sessionಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್ ಮಾಡತಕ್ಕದ್ದು.
ಸ್ನಾತಕೋತ್ತರ, ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ:
*ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವುದು. ಈ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿದಿನವೂ ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು.
*ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗ ಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧಪಡಿಸಿಕೊಳ್ಳುವುದು.
*ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ಪ್ರತಿ Period/ Session ಗೆ ಸಂಬAಧಿಸಿದAತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ವಾಟ್ಸಾಪ್/ ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿಇರತಕ್ಕದ್ದು. ಈ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್ ಮಾಡತಕ್ಕದ್ದು.
*ಆನ್‌ಲೈನ್/ಸಂಪರ್ಕ ತರಗತಿಗಳಿಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಆನ್-ಕ್ಯಾಂಪಸ್ ಹಾಗೂ ಆಫ್-ಕ್ಯಾಂಪಸ್ ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳಬಹುದು.
ಸಾಮಾನ್ಯ ಮಾರ್ಗಸೂಚಿಗಳು:
*ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯ ಸಾಮಾಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.
*ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 (RTPCR) ಪರೀಕ್ಷೆಯನ್ನು ಮಾಡಿಕೊಂಡು Test Report Negative ಇದ್ದಲ್ಲಿ ಮಾತ್ರ ವಿಶ್ವವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.
*ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗೊಂದಿಗೆ Mapping ಮಾಡಿಕೊಳ್ಳುವುದು.
*ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್ಗೆ ಸಂಬಂಧಿಸಿದ ಲಕ್ಷಗಳನ್ನು ಕಂಡು ಬಂದಲ್ಲಿ ಅದನ್ನು ಕೋವಿಡ್ ಕಾರ್ಯಪಡೆ / ಸೆಲ್ ಗಮನಕ್ಕೆ ತರುವಂತೆ ಸೂಚಿಸುವುದು.
*ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು.
*ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್ ಮತ್ತು Face Shield/ Visor ಅನ್ನು ಧರಿಸುವುದು. ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಚಟುವಟಿಕೆಗಳನ್ನು ಪ್ರಾರಂಭಿಸುವಂತಿಲ್ಲ.
ಪ್ರವೇಶ/ ನಿರ್ಗಮನ ಕೇಂದ್ರಗಳ ಸುರಕ್ಷತಾ ಕ್ರಮಗಳು:
*ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಸಾನಿಟೈಸರ್ಗಳ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು.
*ಪ್ರವೇಶ/ ನಿರ್ಗಮನ ಸ್ಥಳಗಳಲ್ಲಿ ಜನಸಂದಣಿಯನ್ನು ತಪ್ಪಿಸಬೇಕು. ವಿವಿಧ ಕೋರ್ಸುಗಳಿಗೆ ಸೀಮಿತ ವಿದ್ಯಾರ್ಥಿ ಸಂಖ್ಯೆಯನ್ನು ನಿಗಧಿಗೊಳಿಸಿ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನದ ಸಮಯಗಳನ್ನು ಅನುಸರಿಸಬೇಕು.
*ಆವರಣದ ಒಳಗೆ ಮತ್ತು ಹೊರಗೆ ಕ್ಯೂ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು, ನೆಲದ ಮೇಲೆ 6 ಅಡಿಗಳ ಅಂತರವಿರುವ ನಿರ್ದಿಷ್ಟ ಗುರುತುಗಳನ್ನು ಮಾಡುವುದು ಮತ್ತು ಅದನ್ನು ಪಾಲಿಸಬೇಕು.
*ಒಂದು ವೇಳೆ ಪ್ರವೇಶ/ ನಿರ್ಗಮನಕ್ಕೆ ಒಂದಕ್ಕಿಂತ ಹೆಚ್ಚು ಗೇಟ್ಗಳನ್ನು ಸಂಸ್ಥೆಯು ಹೊಂದಿದ್ದಲ್ಲಿ, ಜನಸಂದಣಿಯನ್ನು ತಪ್ಪಿಸಲು, ಎಲ್ಲಾ ಗೇಟ್ಗಳನ್ನು ಸಾಕಷ್ಟು ಎಚ್ಚರಿಕೆಯಿಂದ ಬಳಸಬೇಕು. ವಿದ್ಯಾರ್ಥಿಗಳ ಪ್ರವೇಶ ಮತ್ತು ನಿರ್ಗಮನದ ಮೇಲ್ವಿಚಾರಣೆಯನ್ನು ಮಾಡಬೇಕು.
*ವಿದ್ಯಾರ್ಥಿ, ಬೋಧಕ, ಬೋಧಕೇತರ ಸಿಬ್ಬಂದಿಯ ಥರ್ಮಲ್ ತಪಾಸಣೆ, ಮುಖಗವಸು/ ಮಾಸ್ಕ್ ಧರಿಸುವುದು, ಕೈಗಳನ್ನು ಶುದ್ಧಿಗೊಳಿಸುವುದನ್ನು ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಖಚಿತಪಡಿಸಿಕೊಳ್ಳಬೇಕು.
*ಜ್ವರ, ಕೆಮ್ಮು, ಉಸಿರಾಟದ ತೊಂದರೆಯ ಲಕ್ಷಣಗಳನ್ನು ಹೊಂದಿರುವವರು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸುವುದು.
ತರಗತಿ ಕೊಠಡಿಗಳು ಮತ್ತು ಇತರ ಕಲಿಕಾ ತಾಣಗಳು ಹೇಗಿರಬೇಕು:
*ಎಲ್ಲಾ ಕಲಿಕಾ ಸ್ಥಳಗಳಲ್ಲಿ ನೈರ್ಮಲ್ಯವನ್ನು ಖಚಿತಪಡಿಸಿಕೊಳ್ಳಬೇಕು. ಆಗಾಗ್ಗೆ ಸ್ಪರ್ಶಿಸಲ್ಪಡುವ ಡೋರ್ ನಾಬ್ಗಳು, ಎಲಿವೇಟರ್ ಬಟನ್ಗಳು, ಹ್ಯಾಂಡ್ ರೈಲ್ಗಳು, ಕುರ್ಚಿಗಳು, ಬೆಂಚುಗಳು, ವಾಶ್ ರೂಮ್ ಫಿಕ್ಚರ್ಗಳು ಇತ್ಯಾದಿ, ಎಲ್ಲಾ ತರಗತಿಗಳು, ಪ್ರಯೋಗಾಲಯಗಳು, ಲಾಕರ್ಗಳು, ಪಾರ್ಕಿಂಗ್ ಪ್ರದೇಶಗಳು ಹಾಗೂ ತರಗತಿಗಳಲ್ಲಿ ಸ್ವಚ್ಛಗೊಳಿಸುವಿಕೆ ಮತ್ತು ನಿಯತ ಸೋಂಕು ತಡೆಗಟ್ಟುವಿಕೆ (1% ಸೋಡಿಯಂ ಹೈಪೋಕ್ಲೋರೈಟ್ ಬಳಸಿ) ಪ್ರಕ್ರಿಯೆಯನ್ನು ತರಗತಿಗಳು ಪ್ರಾರಂಭವಾಗುವ ಮುನ್ನ ಮತ್ತು ದಿನದ ಕೊನೆಯಲ್ಲಿ ಕಡ್ಡಾಯಗೊಳಿಸಬೇಕು. ಬೋಧನಾ ಸಾಮಗ್ರಿಗಳು, ಕಂಪ್ಯೂಟರ್, ಲ್ಯಾಪ್ ಟಾಪ್, ಪ್ರಿಂಟರ್ ಗಳನ್ನು ನಿಯಮಿತವಾಗಿ 70% ಆಲ್ಕೋಹಾಲ್ ಸ್ವೈಪ್ನಿಂದ ಒರೆಸಿ ಸೋಂಕು ತೆಗೆಯಬೇಕು.
*ತರಗತಿಗಳು, ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್ ಗಳು, ಗ್ರಂಥಾಲಯಗಳು ಮತ್ತು ಅಲ್ಲಿನ ಆಸನಗಳನ್ನು ಸ್ವಚ್ಚವಾಗಿಡಬೇಕು ಹಾಗೂ ಆಸನಗಳ ನಡುವೆ ಅಂತರವನ್ನು ಗುರುತಿಸಬೇಕು.
*ಉಗುಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದು.
*ಆರೋಗ್ಯ ಸೇತು ಆ್ಯಪ್ನ್ನು ಮೊಬೈಲ್ನಲ್ಲಿ ಅನುಸ್ಥಾಪನೆಗೊಳಿಸಿ ಬಳಸುವ ಕುರಿತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಲಹೆ ನೀಡುವುದು.
*ಅವಶ್ಯಕತೆಗೆ ಅನುಸಾರವಾಗಿ ಜಿಲ್ಲಾ ಆರೋಗ್ಯ ಕೇಂದ್ರದ ಸಹಾಯದೊಂದಿಗೆ ವೈದ್ಯಕೀಯ ಸಮಾಲೋಚಕರನ್ನು ವಿದ್ಯಾರ್ಥಿಗಳು ಭೇಟಿಮಾಡಿ ತಮ್ಮ ಆತಂಕ, ಮಾನಸಿಕ ಒತ್ತಡ ಅಥವಾ ಭಯದ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸುವುದು.
*ಸಾಮಾಜಿಕ ಅಂತರ ಕಾಪಾಡಲು ಶಿಕ್ಷಣ ಸಂಸ್ಥೆಗಳ ಆಯಕಟ್ಟಿನ ಸ್ಥಳಗಳಲ್ಲಿ ಸೂಚನಾ ಫಲಕ, ಚಿಹ್ನೆ, ಭಿತ್ತಿಪತ್ರಗಳನ್ನು ಪ್ರದರ್ಶಿಸಬೇಕು. ಸಂಸ್ಥೆಯ ಕೋವಿಡ್ ಕೋಶ/ ಕಾರ್ಯಪಡೆಯ ವಿವರಗಳನ್ನು ಪ್ರಚುರಗೊಳಿಸಬೇಕು (ತುರ್ತು ಸಂಖ್ಯೆ, ಸಹಾಯವಾಣಿ ಸಂಖ್ಯೆ, ಇಮೇಲ್ ಐಡಿ ಮತ್ತು ಸಂಪರ್ಕ).
*ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸುವುದನ್ನು ಕಡ್ಡಾಯಗೊಳಿಸುವುದು.
*ಶಿಕ್ಷಣ ಸಂಸ್ಥೆಗಳು ಅಗತ್ಯಾನುಸಾರ ಬೋಧನಾ ಸಮಯವನ್ನು ವಿಸ್ತರಿಸಬಹುದು ಅಥವಾ ಪರಿವರ್ತಿಸುವುದು.
*ತರಗತಿ ಕೊಠಡಿ, ಕಲಿಕಾ ತಾಣಗಳಲ್ಲಿ ಸ್ಥಳಾವಕಾಶದ ಲಭ್ಯತೆಯನ್ನು ಆಧರಿಸಿ, ತರಗತಿಗಳಿಗೆ ಹಾಜರಾಗಲು 50% ವರೆಗಿನ ವಿದ್ಯಾರ್ಥಿಗಳಿಗೆ ರೊಟೇಷನ್ ಆಧಾರದ ಮೇಲೆ ಅವಕಾಶ ನೀಡುವುದು.
*ಸಂದರ್ಶಕರಿಗೆ ಪ್ರವೇಶ ನೀಡಬಾರದು ಅಥವಾ ಅವರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಪ್ರವೇಶಾವಕಾಶ ನೀಡಿದಲ್ಲಿ ಸಂದರ್ಶಕರ ಸಂಪೂರ್ಣ ಸಂಪರ್ಕ ವಿವರಗಳನ್ನು ಅವನು/ ಅವಳು ಭೇಟಿಯಾಗುವ ವ್ಯಕ್ತಿಗಳ ಹೆಸರುಗಳ ಜೊತೆಗೆ ನಿರ್ವಹಿಸತಕ್ಕದ್ದು.
*ವಿದ್ಯಾರ್ಥಿಗೆ ಅಥವಾ ಅವರ ಮನೆಯಲ್ಲಿ ಯಾವುದೇ ವ್ಯಕ್ತಿಗೆ ಕೋವಿಡ್ ಸೋಂಕಿನ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ, ಮೂಗು ಸೋರುವುದು ಮುಂತಾದ ಲಕ್ಷಣಗಳಿದ್ದಲ್ಲಿ ವಿದ್ಯಾರ್ಥಿಯನ್ನು ಕಾಲೇಜಿಗೆ ಕಳುಹಿಸದೆ ಹಾಗೂ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಪಡೆಯುವ ಬಗ್ಗೆ ವಿದ್ಯಾರ್ಥಿ ಹಾಗೂ ಪೋಷಕರಿಗೆ ಅರಿವು ಮೂಡಿಸುವುದು.