ದೇವನಹಳ್ಳಿ:75ನೇ ಸ್ವಾತಂತ್ರೋತ್ಸವ ಸ್ಮಾರಣಾರ್ಥವಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ದೇವನಹಳ್ಳಿ ಕೋಟೆ ಅವರಣದಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯ ನಡೆಯಿತು.
75ನೇ ಸ್ವಾತಂತ್ರ್ಯಅಮೃತ ಮಹೋತ್ಸವ: ದೇವನಹಳ್ಳಿ ಐತಿಹಾಸಿಕ ಕೋಟೆಯಲ್ಲಿ ಸ್ವಚ್ಛತಾ ಶ್ರಮದಾನ - ದೇವನಹಳ್ಳಿ ಐತಿಹಾಸಿಕ ಕೋಟೆ
75 ವಾರಗಳ ಕಾಲ ನಡೆಯುವ ಈ ವಿಶೇಷ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿಯೂ ಹಮ್ಮಿಕೊಳ್ಳಲಾಗುತ್ತದೆ. ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಪೇಂಟಿಂಗ್, ಉಪನ್ಯಾಸ ಕಾರ್ಯಕ್ರಮಗಳು ಸಹ ನಡೆಯಲಿವೆ. ಕಾಲೇಜು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಹಲವು ಇಲಾಖೆಗಳ ಸಹಯೋಗದಲ್ಲಿ ಕೋಟೆಯ ಅವರಣವನ್ನು ಸ್ವಚ್ಛಗೊಳಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
75 ವಾರಗಳ ಕಾಲ ನಡೆಯುವ ಈ ವಿಶೇಷ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿಯೂ ಹಮ್ಮಿಕೊಳ್ಳಲಾಗುತ್ತದೆ. ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಪೇಂಟಿಂಗ್, ಉಪನ್ಯಾಸ ಕಾರ್ಯಕ್ರಮಗಳು ಸಹ ನಡೆಯಲಿವೆ. ಕಾಲೇಜು ವಿದ್ಯಾರ್ಥಿಗಳು, ಪೌರಕಾರ್ಮಿಕರು, ಹಲವು ಇಲಾಖೆಗಳ ಸಹಯೋಗದಲ್ಲಿ ಕೋಟೆಯ ಅವರಣವನ್ನು ಸ್ವಚ್ಛಗೊಳಿಸಲಾಯಿತು.
TAGGED:
ದೇವನಹಳ್ಳಿ ಐತಿಹಾಸಿಕ ಕೋಟೆ