ಕರ್ನಾಟಕ

karnataka

ETV Bharat / city

ಪ್ರಣಬ್ ಮುಖರ್ಜಿ ನಿಧನ: ಸಂತಾಪ ಸೂಚಿಸಿದ ಹೆಚ್​​ಡಿಡಿ, ಹೆಚ್​ಡಿಕೆ - Former president pranab mukarji death

ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರು ಇಂದು ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.

Former president pranab mukarji death
ಸಂತಾಪ ಸೂಚಿಸಿದ ಹೆಚ್​​ಡಿಡಿ, ಹೆಚ್​ಡಿಕೆ

By

Published : Aug 31, 2020, 7:50 PM IST

ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ಬೇಸರವಾಗಿದೆ. ನಾವು ದಶಕಗಳವರೆಗೆ ಸುದೀರ್ಘ ಸಂಪರ್ಕದಲ್ಲಿದ್ದೆವು. ಅವರು ತಮ್ಮ ತೀಕ್ಷ್ಣವಾದ ಬುದ್ಧಿ ಶಕ್ತಿಯನ್ನು ಕಠಿಣ ಪರಿಶ್ರಮದೊಂದಿಗೆ ಸಂಯೋಜಿಸಿದ ರೀತಿಯನ್ನು ನಾನು ಯಾವಾಗಲೂ ಮೆಚ್ಚಿದ್ದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

ದೇಶಕ್ಕೆ ತುಂಬಲಾರದ ನಷ್ಟ:ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಸೌಮ್ಯ ವ್ಯಕ್ತಿತ್ವದ ಪ್ರಣಬ್ ಮುಖರ್ಜಿ ಅವರು ಈ ದೇಶ ಕಂಡ ಅಪರೂಪದ ರಾಜಕಾರಣಿ. ಪಕ್ಷಾತೀತವಾಗಿ ಎಲ್ಲರ ಪ್ರೀತಿಗೆ ಭಾಜನರಾಗಿದ್ದ ಅವರ ರಾಜಕೀಯ ಆದರ್ಶ ಎಲ್ಲರಿಗೂ ಮಾದರಿಯಾಗಿತ್ತು. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ABOUT THE AUTHOR

...view details