ಕರ್ನಾಟಕ

karnataka

ETV Bharat / city

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್ ನಿರ್ಮಾಣಕ್ಕೆ ಕೇಂದ್ರದಿಂದ 40 ಕೋಟಿ ರೂ. ನೀಡಲಾಗುತ್ತೆ: ಸದಾನಂದಗೌಡ - ಬೆಂಗಳೂರು ಸುದ್ದಿ

ಭಾರತವನ್ನು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಯಾಗಿ ರೂಪಿಸಲು ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ತುಂಬಾ ಯೋಜಿತವಾಗಿ ಹೆಜ್ಜೆ ಇಡುತ್ತಿದೆ. ದೇಶದ ರಸಗೊಬ್ಬರ ವಲಯವನ್ನು ಸಂಪೂರ್ಣವಾಗಿ ಸ್ವಾವಲಂಬಿ ಮಾಡಬೇಕು ಎಂದು ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.

DV Sadananda gowda
ಡಿ.ವಿ ಸದಾನಂದಗೌಡ

By

Published : Jan 24, 2021, 5:23 PM IST

ಬೆಂಗಳೂರು:ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್​ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮಂಗಳೂರಿನಲ್ಲಿ ಸ್ಥಾಪಿಸುವ ಪಾರ್ಕ್​ಗೆ ಕೇಂದ್ರ 40 ಕೋಟಿ ರೂ. ನೀಡಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಕೇಂದ್ರ ಸಚಿವ ಸದಾನಂದಗೌಡ

ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ತಲಾ ಒಂದೊಂದು ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮೊನ್ನೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡಿದ್ದೇವೆ. ಆದಷ್ಟು ಬೇಗ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಿ ಅಂತಿಮ ಒಪ್ಪಿಗೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ. ಆರು ತಿಂಗಳ ಒಳಗೆ ಅಂತಿಮ ಒಪ್ಪಿಗೆ ನೀಡಿ ಯೋಜನೆಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಧ್ಯಮ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಪಾರ್ಕ್‌ ಅಂದರೆ ಏನು?

ಈ ಬಗ್ಗೆ ಬಹಳ ಜನರಿಗೆ ಕುತೂಹಲವಿದೆ. ಇದೊಂದು ಪ್ಲಾಸ್ಟಿಕ್‌ ಸಂಬಂಧಿತ ಕೈಗಾರಿಕೆಗಳಿಗೆ ಸೀಮಿತವಾದ ಕೈಗಾರಿಕಾಭಿವೃದ್ಧಿ ಕೇಂದ್ರ. ಪ್ಲಾಸ್ಟಿಕ್‌ ಸಂಬಂಧಿತ ಕೈಗಾರಿಕೆಗಳ ಅಭಿವೃದ್ಧಿಗೆ ಬೇಕಾದ ಎಲ್ಲಾ ಆಧುನಿಕ ತಂತ್ರಜ್ಞಾನ ಸೌಕರ್ಯಗಳೂ ಇಲ್ಲಿರುತ್ತವೆ. ಇವು ಸಾಮಾನ್ಯ ಸೌಲಭ್ಯಗಳಾಗಿವೆ (common facilities). ಇಲ್ಲಿ ಸ್ಥಾಪಿತವಾಗುವ ಎಲ್ಲಾ ಕೈಗಾರಿಕಾ ಘಟಕಗಳೂ ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು. ಇದರಿಂದ ನಮ್ಮ ಸ್ವದೇಶಿ ಪ್ಲಾಸ್ಟಿಕ್‌ ಕೈಗಾರಿಕೆಗಳು ಅಂತಾರಾಷ್ಟ್ರೀಯ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಬಹುದು. ಆಗ ನಮ್ಮ ಕಂಪನಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಪೈಪೋಟಿ ನಡೆಸಲು ಶಕ್ತವಾಗುತ್ತವೆ. ತಂತಾನೆ ರಫ್ತು ವೃದ್ಧಿಯಾಗುತ್ತದೆ ಎಂದು ಕೇಂದ್ರ ಸಚಿವರು ವಿವರಿಸಿದರು.

ಇದೊಂದು ಜಂಟಿ ಯೋಜನೆಯಾಗಿದೆ. ರಾಜ್ಯವು ಈ ಯೋಜನೆಯನ್ನು ಈಗಾಗಲೇ ಅಸ್ತಿತ್ವದಲ್ಲಿರುವ ಕೆಎಸ್‌ಐಡಿಸಿ ಮೂಲಕ ಅಥವಾ ಹೊಸ ವಿಶೇಷ ಉದ್ದೇಶದ ಕಂಪನಿ (SPV) ಸ್ಥಾಪಿಸುವ ಮೂಲಕ ಅನುಷ್ಠಾನಗೊಳಿಸಬಹುದಾಗಿದೆ. ಈ ಪ್ಲಾಸ್ಟಿಕ್‌ ಪಾರ್ಕ್​ನಲ್ಲಿ ಅಭಿವೃದ್ಧಿಪಡಿಸುವ ಸಾಮಾನ್ಯ ಸೌಕರ್ಯಗಳ (common facilities) ಅರ್ಧ ವೆಚ್ಚವನ್ನು ನಮ್ಮ ಇಲಾಖೆಯು ಭರಿಸುತ್ತದೆ. ಇದಕ್ಕೆ 40 ಕೋಟಿ ರೂಪಾಯಿ ನಿಗದಿಪಡಿಸಲಾಗಿದ್ದು, ನಾಲ್ಕು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಆದಷ್ಟು ಬೇಗ ಡಿಪಿಆರ್‌ ಕಳುಹಿಸಿಕೊಡಿ ಎಂದು ರಾಜ್ಯಕ್ಕೆ ಕೇಳಿಕೊಂಡಿದ್ದೇವೆ. ನಾನು ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರಯುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

ಭಾರತವನ್ನು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಯಾಗಿ ರೂಪಿಸಲು ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ತುಂಬಾ ಯೋಜಿತವಾಗಿ ಹೆಜ್ಜೆ ಇಡುತ್ತಿದೆ. ದೇಶದ ರಸಗೊಬ್ಬರ ವಲಯವನ್ನು ಸಂಪೂರ್ಣವಾಗಿ ಸ್ವಾವಲಂಬಿ ಮಾಡಬೇಕು ಎಂದು ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.

4 ರಸಗೊಬ್ಬರ ಕಾರ್ಖಾನೆ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ:

ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲಾಗುತ್ತಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಹಣ ವೆಚ್ಚ ಮಾಡಲಾಗುತ್ತಿದೆ. ಈ ಪೈಕಿ ರಾಮಗುಂಡಮ್‌ ಸ್ಥಾವರದ ಕೆಲಸ ಬಹುತೇಕ ಮುಗಿದಿದ್ದು, ಯೂರಿಯಾ ಉತ್ಪಾದನೆಗೆ ಸಜ್ಜಾಗಿದೆ ಎಂದು ಸಚಿವರು ಪ್ರಕಟಿಸಿದರು.

ಅದೇ ರೀತಿ ಔಷಧ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿ ಮಾಡಲು ನಾನು ನಿರ್ವಹಿಸುವ ಔಷಧ ಇಲಾಖೆಯು ಹಲವು ಯೋಜನೆಗಳನ್ನು ರೂಪಿಸಿದೆ. ಈ ಉಪಕ್ರಮಗಳಲ್ಲಿ ಮೂರು ಬಲ್ಕ್‌ ಡ್ರಗ್‌ ಪಾರ್ಕ್‌ಗಳು ಹಾಗೂ ನಾಲ್ಕು ಮೆಡಿಕಲ್‌ ಡಿವೈಸ್‌ ಪಾರ್ಕ್‌ಗಳು ಸೇರಿವೆ ಎಂದು ಅವರು ತಿಳಿಸಿದರು.

ABOUT THE AUTHOR

...view details