ಕರ್ನಾಟಕ

karnataka

ETV Bharat / city

ಮಸೀದಿಗಳ ಧ್ವನಿವರ್ಧಕ ತೆರವುಗೊಳಿಸುವಂತೆ ಡಿಜಿ ಆದೇಶ - ban of loudspeakers at mosques

ವಕೀಲರೊಬ್ಬರು ನೀಡಿದ ದೂರಿನನ್ವಯ ರಾಜ್ಯಾದ್ಯಂತ ಮಸೀದಿಗಳಲ್ಲಿರುವ‌ ಧ್ವನಿವರ್ಧಕ ತೆರವುಗೊಳಿಸುವಂತೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

DG Praveen Sood
ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

By

Published : Nov 5, 2020, 3:38 PM IST

ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿರುವ‌ ಧ್ವನಿವರ್ಧಕ ತೆರವುಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಲ್ಲಿಸುವ ಪ್ರಾರ್ಥನೆಯಿಂದ ಬಹಳ ಶಬ್ದ ಉಂಟಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿವೆ. ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕ ಹಾಗೂ ಮೈಕ್ರೋ ಫೋನ್ ಬಳಕೆಮಾಡಬಾರದೆಂದು ನ್ಯಾಯಾಲಯ ಆದೇಶ ನೀಡಿದ್ದರೂ ಇದನ್ನು ಪಾಲನೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಿ ವಕೀಲರಾದ ಹರ್ಷ ಮುತಾಲಿಕ್ ಡಿಜಿ, ಐಜಿಪಿ ಪ್ರವೀಣ್ ಸೂದ್​ಗೆ ಪತ್ರ ಬರೆದಿದ್ದರು. ಧ್ವನಿವರ್ಧಕಗಳನ್ನ ನಿಷೇಧಿಸಬೇಕೆಂದು ಆಗ್ರಹಿಸಿದ್ದರು.

ಹರ್ಷ ಮುತಾಲಿಕ್ ನೀಡಿದ ದೂರಿನನ್ವಯ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದು, ಧ್ವನಿವರ್ಧಕಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪೊಲೀಸ್​​​ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದಾರೆ.

ABOUT THE AUTHOR

...view details