ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯ ಪುರಾಣ ಸದ್ಯಕ್ಕೆ ಮುಗಿಯುವಂತೆ ಕಾಣ್ತಿಲ್ಲ. ಸದ್ಯ ನಾಲ್ಕನೇ ತರಗತಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪಾಠ ಕೈ ಬಿಡಲಾಗಿದೆ ಎಂಬ ಸುದ್ದಿಗೆ ಕರ್ನಾಟಕ ಪಠ್ಯಪುಸ್ತಕ ಸಂಘವು ಸ್ಪಷ್ಟೀಕರಣ ಕೊಟ್ಟಿದೆ.
ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯವರು 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ, ಅವಮಾನಗೊಳಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿಲ್ಲ.