ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರು ವಾಪಸ್ ಪಡೆಯಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪರದಾಟ ನಡೆಸುತ್ತಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಲಿರುವ ದಿನೇಶ್ ಕಲ್ಲಹಳ್ಳಿ - Dinesh Kallahalli to appear before Cubbon Park police
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರು ವಾಪಸ್ ಪಡೆಯಲು ದಿನೇಶ್ ಕಲ್ಲಹಳ್ಳಿ ಮುಂದಾಗಿದ್ದು, ಇಂದು ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
![ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಲಿರುವ ದಿನೇಶ್ ಕಲ್ಲಹಳ್ಳಿ ದಿನೇಶ್ ಕಲ್ಲಹಳ್ಳಿ](https://etvbharatimages.akamaized.net/etvbharat/prod-images/768-512-10945441-thumbnail-3x2-lek.jpg)
ಮಾನಸಿಕ ನೆಮ್ಮದಿ ಹಿನ್ನೆಲೆ ದೂರು ವಾಪಸ್ ಪಡೆಯುತ್ತಿರುವುದಾಗಿ ಸಮಜಾಯಿಷಿ ನೀಡಿ, ವಕೀಲರ ಮೂಲಕ ಮೊದಲು ಕಬ್ಬನ್ ಪಾರ್ಕ್ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿದ್ದರು. ನಂತರ ದೂರು ಹಿಂಪಡೆಯಲು ಖುದ್ದು ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ವಕೀಲರೊಂದಿಗೆ ಬಂದು ದೂರು ಹಿಂಪಡೆಯುವಂತೆ ಮನವಿ ಮಾಡಿದ್ದರು.
ಮನವಿ ಅರ್ಜಿ ಸ್ವೀಕರಿಸಿರುವ ಪೊಲೀಸರು ಪ್ರಕರಣ ಮುಂದುವರಿಸಬೇಕಾ?, ಬೇಡ್ವಾ? ಎಂಬುದರ ಕುರಿತಂತೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಲು ಮುಂದಾಗಿದ್ದಾರೆ. ಮೇಲಧಿಕಾರಿಗಳು ಹಾಗೂ ಕಾನೂನು ತಜ್ಞರ ಸೂಚನೆಯಂತೆ ಪ್ರಕರಣದ ತನಿಖೆ ನಿರ್ಧಾರವಾಗಲಿದೆ. ಈ ನಿಟ್ಟಿನಲ್ಲಿ ಇಂದು ಕಲ್ಲಹಳ್ಳಿಗೆ ಬರುವಂತೆ ಸೂಚನೆ ನೀಡಿದ್ದು, ಇದರಂತೆ ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ. ವಿಚಾರಣೆ ನಡೆಸಿದ ಬಳಿಕ ಪೊಲೀಸರು ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.