ಕರ್ನಾಟಕ

karnataka

ETV Bharat / city

ಡಿಪ್ಲೊಮಾ ಶಿಕ್ಷಣ ಪಿಯುಸಿಗೆ ಸಮ: ರಾಜ್ಯ ಸರ್ಕಾರ ಘೋಷಣೆ - ಬೆಂಗಳೂರು

ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ‌ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮ ಎಂದು ಘೋಷಿಸಲಾಗಿದೆ.

ವಿಧಾನಸೌಧ
ವಿಧಾನಸೌಧ

By

Published : Sep 30, 2021, 8:40 PM IST

ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಸರ್ಕಾರ ಘೋಷಿಸಿದೆ.

ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ‌ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ‌ ವಿಷಯದಲ್ಲಿ‌ ಗೊಂದಲ ಇದ್ದ ಕಾರಣ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಅವರು ಹಲವು ಸಭೆಗಳನ್ನು‌ ಮಾಡಿದ್ದರು. ಅವರ ಸಲಹೆ‌ ಮೇರೆಗೆ ಈ ತೀರ್ಮಾನ ಮಾಡಲಾಗಿದೆ.

2015ಕ್ಕಿಂತ ಹಿಂದಿನ‌ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್​​ಸಿ‌ ನಡೆಸುವ ಇಲಾಖಾ‌ ಪರೀಕ್ಷೆಗಳ‌ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯ‌ ಮಾಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ:NAD ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ: ಸಚಿವ ಅಶ್ವತ್ಥ್​ ನಾರಾಯಣ ಸೂಚನೆ

ABOUT THE AUTHOR

...view details