ಬೆಂಗಳೂರು:ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಭಿನ್ನಮತ ಇದೇ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.
ಹೌದು, ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ನಾಮಪತ್ರ ಸಲ್ಲಿಸಲು ಚಿಕ್ಕಬಳ್ಳಾಪುರಕ್ಕೆ ಬಂದಿದ್ದು, ಈ ವೇಳೆ ಕಾಂಗ್ರೆಸ್ನ ಶಾಸಕ ವೆಂಕಟರಮಣಯ್ಯ, ಸಚಿವ ಎಂ.ಟಿ ಬಿ ನಾಗರಾಜ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮೊಯ್ಲಿಗೆ ಸಾಥ್ ನೀಡಿದ್ದಾರೆ. ಆದರೆ ಜೆಡಿಎಸ್ ಶಾಸಕ ನಿಸರ್ಗ ನಾರಾಯಣಸ್ವಾಮಿ ಮತ್ತು ಮುಖಂಡರು ಮಾತ್ರ ಕಾಣಿಸಿಕೊಂಡಿಲ್ಲ.
ಜೆಡಿಎಸ್ ಮುಖಂಡರನ್ನು ಸಂಪರ್ಕಿಸಿಲ್ವ ಮೊಯ್ಲಿ..!
ಸಂಸದ ವೀರಪ್ಪ ಮೊಯ್ಲಿ ಅಥವಾ ಕಾಂಗ್ರೆಸ್ ಮುಖಂಡರು ಜೆಡಿಎಸ್ ಶಾಸಕ ಸೇರಿದಂತೆ ಆ ಪಕ್ಷದ ಮುಖಂಡರನ್ನು ಸಂಪರ್ಕಿಸಿಲ್ಲವೆಂದು ಜೆಡಿಎಸ್ ಮೂಲಗಳು ಹೇಳುತ್ತಿವೆ.
ಕಾಮಗಾರಿ ಸಂದರ್ಭದಲ್ಲಿ ಮಾತ್ರ ಮೊಯ್ಲಿ ಜೊತೆಯಲ್ಲಿರುತ್ತಿದ್ದ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಗೈರುಹಾಜರಾಗಿದ್ದಾರೆ. ಅಲ್ಲದೆ, ಬಹಿರಂಗವಾಗಿಯೇ ಮೊಯ್ಲಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಕೂಡ ಗೈರುಹಾಜರಾಗಿದ್ದು ಮೈತ್ರಿ ಪಕ್ಷದಲ್ಲಿನ ಭಿನ್ನಮತಕ್ಕೆ ಸಾಕ್ಷಿಯಂಬಂತೆ ಕಂಡುಬಂತು.