ಬೆಂಗಳೂರು :ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಪ್ರಮಾಣ ಮುಂದುವರೆದಿದೆ. ಸೋಂಕು ಹೆಚ್ಚಳವಾಗ್ತಿರುವ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಮಿತಿ ಸಭೆ ನಡೆಯಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಇಂದು ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರುವವರು, ಮಕ್ಕಳ ಬಗ್ಗೆ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಬೆಳಗಾವಿ ಮಕ್ಕಳ ಸಾವಿನ ಪ್ರಕರಣದ ಬಗ್ಗೆ 2 ದಿನದಲ್ಲಿ ವರದಿ :ಬೆಳಗಾವಿಯಲ್ಲಿ ಮೂವರು ಮಕ್ಕಳು ರುಬೆಲ್ಲಾ ಚುಚ್ಚುಮದ್ದಿನಿಂದ ಸಾವನ್ನಪ್ಪಿರುವ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ನಿಂದ ಸತ್ತಿರೋ ಬಗ್ಗೆ ವರದಿ ಆಗಿದೆ. ಆದರೂ ಮತ್ತೊಂದು ತನಿಖೆಗೆ ಸೂಚನೆ ನೀಡಿದ್ದೇನೆ. ಎರಡು ದಿನಗಳಲ್ಲಿ ವರದಿ ಕೊಡಲು ಸೂಚನೆ ನೀಡಲಾಗಿದೆ.