ಕರ್ನಾಟಕ

karnataka

ETV Bharat / city

ಮನೆ ಮನೆಗೂ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್​​ ನೀಡಿ: ಹೆಚ್​​​ಡಿಕೆ ಒತ್ತಾಯ - Bangalore city news

ರಾಜ್ಯದಲ್ಲಿ ವಿಪರೀತವಾಗಿ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಯೊಂದು ಮನೆಗೂ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್​ ಮತ್ತು ಸ್ಯಾನಿಟೈಸರ್​​ ವಿತರಣೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Breaking News

By

Published : Jul 13, 2020, 1:13 PM IST

ಬೆಂಗಳೂರು: ಕೊರೊನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ 'ಸಿ' ಔಷಧ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಆರೋಗ್ಯ ಕಿಟ್​​​​ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣ ಮಾಡಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.

ಎಲ್ಲರಿಗೂ ಆರೋಗ್ಯ ಕಿಟ್ ನೀಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆರೋಗ್ಯ ಕಿಟ್ ನೀಡಲು ಸರ್ಕಾರ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು. ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ ಎಂದಿದ್ದಾರೆ.

ಸರ್ಕಾರ ದಿನಕ್ಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೊನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ABOUT THE AUTHOR

...view details