ಕರ್ನಾಟಕ

karnataka

ETV Bharat / city

ಕೆಐಎಎಲ್​ ಅಂಗಡಿಗಳ​ ಮೇಲೆ ತಂಬಾಕು ನಿಯಂತ್ರಣ ಘಟಕ ದಾಳಿ: 13 ಕೇಸ್ ದಾಖಲು - ಕೆಐಎಎಲ್​ನ ಅಂಗಡಿಗಳ​ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರಕ್ಕೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಅಂಗಡಿಗಳ ಮೇಲೆ ರೇಡ್ ನಡೆಸಿದರು.

District Tobacco Control Unit attacks KIAL's stores
ಕೆಐಎಎಲ್​ನ ಅಂಗಡಿಗಳ​ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ

By

Published : Mar 6, 2020, 5:05 AM IST

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರಕ್ಕೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಅಂಗಡಿಗಳ ಮೇಲೆ ದಾಳಿ ಮಾಡಿ 13 ಪ್ರಕರಣ ದಾಖಲಿಸಿಕೊಂಡು 2,500 ರೂಪಾಯಿ ದಂಡ ವಿಧಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು. ಕಾರ್ಯಾಚರಣೆಯ ನೇತೃತ್ವವನ್ನ ಜಿಲ್ಲಾ ಸಮಾಲೋಚಕಿ ಡಾ.ವಿದ್ಯಾರಾಣಿ ವಹಿಸಿದ್ದರು.

ಈ ವೇಳೆ ಹಿರಿಯ ಅರೋಗ್ಯ ನಿರೀಕ್ಷಕ ಸಂಪತ್ ಕುಮಾರ್ ಸೇರಿದಂತೆ ವಿಮಾನ ನಿಲ್ದಾಣದ ಸಿಬ್ಬಂದಿ ಉಪಸ್ಥಿತರಿದ್ದರು. ವಿಮಾನ ನಿಲ್ದಾಣದ ಕೇಂದ್ರದಲ್ಲಿ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ದಂಡ ವಿಧಿಸಿ, ಪ್ರಕರಣ ದಾಖಲಿಸಿದರು.

For All Latest Updates

ABOUT THE AUTHOR

...view details