ಕರ್ನಾಟಕ

karnataka

ETV Bharat / city

ಜಾತ್ಯತೀತ ತತ್ತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು: ಡಿ.ಕೆ.ಶಿವಕುಮಾರ್ ಮನವಿ - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಜಾತ್ಯತೀತ ತತ್ತ್ವ ಉಳಿಸಲು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜೆಡಿಎಸ್​ಗೆ ನಾನು ಮತ್ತು ಸಿದ್ದರಾಮಯ್ಯ ಮನವಿ ಮಾಡಿದ್ದೇವೆ. ಈ ಹಿಂದೆ ಜೆಡಿಎಸ್ ಪಕ್ಷಕ್ಕೆ ನಾವು ಸಾಕಷ್ಟು ಬಾರಿ ಸಹಾಯ ಮಾಡಿದ್ದು, ಈ ಬಾರಿ ಅವರು ನಮಗೆ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

By

Published : Jun 10, 2022, 12:03 PM IST

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಪಕ್ಷದ ನಾಯಕರು ಚರ್ಚೆ ಮಾಡಿ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಂಡ್ಯ ಮೂಲದ ಅಲ್ಪಸಂಖ್ಯಾತ ಸಮುದಾಯದ ಸಾಚಾರ್ ವರದಿಗೆ ಕಾರಣಕರ್ತರಾದ ನಮ್ಮ ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್ ಅವರ ಪುತ್ರ, ವಿದ್ಯಾವಂತ ಯುವಕ ಮನ್ಸೂರ್ ಅಲಿ ಖಾನ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಜಾತ್ಯತೀತ ತತ್ತ್ವ ಉಳಿಸಲು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜೆಡಿಎಸ್​ಗೆ ನಾನು ಮತ್ತು ಸಿದ್ದರಾಮಯ್ಯ ಮನವಿ ಮಾಡಿದ್ದೇವೆ. ಈ ಹಿಂದೆ ಜೆಡಿಎಸ್ ಪಕ್ಷಕ್ಕೆ ನಾವು ಸಾಕಷ್ಟು ಬಾರಿ ಸಹಾಯ ಮಾಡಿದ್ದು, ಈ ಬಾರಿ ಅವರು ನಮಗೆ ಬೆಂಬಲ ನೀಡಬೇಕು ಎಂದು ಹೇಳಿದರು.

ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ಪಕ್ಷದ ವಿಚಾರ. ನಮ್ಮ ಪಕ್ಷದ ಹಲವು ನಾಯಕರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಯಾರು ಯಾರ ಮನೆಗೆ ಹೋಗಿದ್ದಾರೆ. ಯಾರಿಗೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇದು ತಪ್ಪು ಎಂದು ನಾನು ಹೇಳುವುದಿಲ್ಲ ಎಂದು ಉತ್ತರಿಸಿದರು.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್​​​ಗೆ 46 ಪ್ರಥಮ ಪ್ರಾಶಸ್ತ್ಯದ ಮತ ಚಲಾವಣೆ

ABOUT THE AUTHOR

...view details