ಕರ್ನಾಟಕ

karnataka

ETV Bharat / city

ಪಿಎಸ್​ಐ ಮರುಪರೀಕ್ಷೆಗೆ ಆದೇಶ.. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯ: ಡಿಕೆಶಿ - DK Shivakumar opposes PSI re-examination

ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಹಗರಣದಲ್ಲಿ ಬಿಜೆಪಿಗರ ಹೆಸರು ಹೊರಬರುತ್ತದೆ ಎಂದು ಮರುಪರೀಕ್ಷೆಗೆ ಸರ್ಕಾರ ಆದೇಶಿಸಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅಭಿಪ್ರಾಯಪಟ್ಟರು.

dk-shivakumar
ಡಿಕೆಶಿ

By

Published : Apr 30, 2022, 8:30 PM IST

ಬೆಂಗಳೂರು:ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ, ಸರ್ಕಾರದ ಎಲ್ಲಾ ನೇಮಕಾತಿ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ, ಅಕ್ರಮ, ಹಗರಣಗಳ ಸರಮಾಲೆ ಇದೆ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆಯಲ್ಲೂ ಅಕ್ರಮವಾಗಿದೆ. ರಾಜ್ಯದಲ್ಲಿ ಯುವಕರ, ಉದ್ಯೋಗಾಕಾಂಕ್ಷಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗುತ್ತಿದೆ ಎಂದು ಕಿಡಿಕಾರಿದರು.

ಗೃಹ ಸಚಿವರು ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಧಿವೇಶನದಲ್ಲೇ ಹೇಳಿದ್ದರು. ನಮ್ಮ ಶಾಸಕರು, ನಾಯಕರು ಈ ಅಕ್ರಮದ ವಿಚಾರ ಬಹಿರಂಗಪಡಿಸಿದರೆ, ಅವರನ್ನು ಬೆದರಿಸಲು ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಇದಕ್ಕೆಲ್ಲ ಹೆದರುವುದಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ನಿಮ್ಮ ಮುಂಖಂಡರೇ ಗೌಪ್ಯ ಸ್ಥಳದಲ್ಲಿ ಇಟ್ಟಿದ್ದರು ಎಂದು ಗೊತ್ತಿದೆ ಎಂದರು.

ವರದಿಯಲ್ಲಿ ನಿಮ್ಮವರ ಹೆಸರು ಬರಲಿದೆ ಎಂಬ ಕಾರಣಕ್ಕೆ ಮರುಪರೀಕ್ಷೆಗೆ ಆದೇಶಿಸಿದ್ದೀರಿ. ರಾಜ್ಯದ ಜನತೆ, ಯುವಕರು, ರಾಜ್ಯದ ತಂದೆ ತಾಯಂದಿರು, ಮತದಾರ ಪ್ರಭುಗಳು ಶಿಕ್ಷೆ ನೀಡಲಿದ್ದಾರೆ. ನಿಮ್ಮನ್ನು ಜನರೇ ಕಿತ್ತೊಗೆಯುತ್ತಾರೆ. ಆ ಕಾಲ ಸನ್ನಿಹಿತವಾಗುತ್ತಿದೆ ಎಂದರು.

ಓದಿ:ಬೆಂಗಳೂರು ಟ್ರಾಫಿಕ್​ಗೆ ಡೋಂಟ್​ ಕೇರ್​..​ ರಸ್ತೆ ಮಧ್ಯೆ ಕುಳಿತು ಉಪಹಾರ ಸೇವಿಸಿದ ಕುಡುಕ - ವಿಡಿಯೋ

ABOUT THE AUTHOR

...view details