ಕರ್ನಾಟಕ

karnataka

ETV Bharat / city

ಕಾಂಗ್ರೆಸ್​ ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಡಿಕೆಶಿ ಖಡಕ್​ ಸಂದೇಶ

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ- ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು-ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

kpcc president DK shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

By

Published : Jul 23, 2022, 1:09 PM IST

ಬೆಂಗಳೂರು:ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಸದಾಶಿವ ನಗರ ನಿವಾಸದ ಬಳಿ ಮಾಧ್ಯಮದವರು, ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, 'ನನ್ನ ಲೆವೆಲ್​​ಗೆ ಮಾತನಾಡುವವರ ವಿಚಾರವನ್ನು ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ' ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು ಎಂದರು.

ಈ ಎಲ್ಲವನ್ನು ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೆ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ ಎಂದು ಒತ್ತಾಯಿಸಿದರು.

ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ ಎಂದರು.

ನಾನು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ಹೋಗುವುದಿಲ್ಲ. ನನ್ನದೇ ಆದ ಪ್ರತ್ಯೇಕ ಗುರುತು ಇದೆ ಎಂಬ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತ '224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ' ಎಂದು ತಿಳಿಸಿದರು.

ಇದನ್ನೂ ಓದಿ:ಜಮೀರ್​ಗೆಲ್ಲ ಉತ್ತರ ಕೊಡೊಕೆ ನಾನು ತಯಾರಿಲ್ಲ: ಡಿಕೆಶಿ

ABOUT THE AUTHOR

...view details