ಕರ್ನಾಟಕ

karnataka

ETV Bharat / city

ಕಲಬುರಗಿ ಪಾಲಿಕೆ ವಿಚಾರವಾಗಿ ರಾಷ್ಟ್ರೀಯ ನಾಯಕರಾದ ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ : ಡಿಕೆಶಿ - ಕಾಂಗ್ರೆಸ್‌

ಕಾಂಗ್ರೆಸ್ ಪಕ್ಷಕ್ಕೆ ಏನೆಲ್ಲಾ ಬೇಕೋ, ಎಲ್ಲರಿಗೂ ಒಳ್ಳೆಯದಾಗುವ ದೃಷ್ಟಿಯಿಂದ ಅವಶ್ಯಕತೆ ಇದ್ದಾಗ ಏನು ಮಾಡಬೇಕೋ, ಅದನ್ನೆಲ್ಲಾ ನಾನು ಮಾಡುತ್ತೇನೆ. ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ. ಎರಡೂ ಪಕ್ಷಗಳು ಒಟ್ಟಿಗೆ ಆಡಳಿತ ನಡೆಸಬೇಕು ಎಂಬ ಪ್ರಸ್ತಾವನೆಯಷ್ಟೇ ನನ್ನ ಮುಂದೆ ಇದೆ..

DK Shivakumar statement on kalaburagi corporation election result
ಕಲಬುರಗಿ ಪಾಲಿಕೆ ವಿಚಾರವಾಗಿ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ: ಡಿಕೆಶಿ

By

Published : Sep 11, 2021, 5:14 PM IST

ಬೆಂಗಳೂರು :ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ನಾಯಕರಾದ ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆ ಮೈತ್ರಿ ಕುರಿತಂತೆ ಡಿಕೆಶಿ ಪ್ರತಿಕ್ರಿಯೆ ನೀಡಿರುವುದು..

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದು, ಉತ್ತಮ ಫಲಿತಾಂಶ ಸಿಕ್ಕಿದೆ. ಜೆಡಿಎಸ್ ಕೂಡ ಗೆದ್ದಿದೆ. ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿ ನಿಂತಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳು ಇದ್ದರೂ ಕೂಡ ಅವರು 39, ನಾವು 33 ಸ್ಥಾನಗಳನ್ನು ಗೆದ್ದಿದ್ದೇವೆ. ಜತೆಗೆ ನಮ್ಮ ಬಂಡಾಯ ಸದಸ್ಯರೂ ಗೆದ್ದಿದ್ದಾರೆ ಎಂದು ಹೇಳಿದರು.

ನಾನು ನಾಳೆ ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಹೋಗುತ್ತಿದ್ದು, ಅಲ್ಲಿ ನಮ್ಮ ಗೆದ್ದ ಹಾಗೂ ಸೋತ ಅಭ್ಯರ್ಥಿಗಳನ್ನು ಮಾತನಾಡಿಸಿಕೊಂಡು ಬರುತ್ತೇನೆ. ಕಲಬುರಗಿಗೆ ಸಂಬಂಧಿಸಿದಂತೆ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಬ್ಬ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜತೆ ಮಾತನಾಡಿದ್ದಾರೆ ಎಂದರು.

'ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ'

ಅಲ್ಲಿ ಮತದಾರರು ತಮ್ಮ ತೀರ್ಪು ನೀಡಿದ್ದಾರೆ. ಬಿಜೆಪಿಯವರು ಬಳ್ಳಾರಿ, ರಾಮನಗರ, ಚನ್ನಪಟ್ಟಣದ ಚುನಾವಣೆ ದಿನಾಂಕ ಘೋಷಿಸಲು ಹಿಂದೆ-ಮುಂದೆ ನೋಡುತ್ತಿದ್ದಾರೆ. ಬಿಜೆಪಿ ತನ್ನ ಅಧಿಕಾರವನ್ನು ಎಷ್ಟು ಸಾಧ್ಯವೋ ಅಷ್ಟು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಇನ್ನು, ಕಲಬುರಗಿ ವಿಚಾರವಾಗಿ ಜೆಡಿಎಸ್ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಜತೆ ನೇರವಾಗಿ ಮಾತನಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಏನೆಲ್ಲಾ ಬೇಕೋ, ಎಲ್ಲರಿಗೂ ಒಳ್ಳೆಯದಾಗುವ ದೃಷ್ಟಿಯಿಂದ ಅವಶ್ಯಕತೆ ಇದ್ದಾಗ ಏನು ಮಾಡಬೇಕೋ, ಅದನ್ನೆಲ್ಲಾ ನಾನು ಮಾಡುತ್ತೇನೆ. ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ. ಎರಡೂ ಪಕ್ಷಗಳು ಒಟ್ಟಿಗೆ ಆಡಳಿತ ನಡೆಸಬೇಕು ಎಂಬ ಪ್ರಸ್ತಾವನೆಯಷ್ಟೇ ನನ್ನ ಮುಂದೆ ಇದೆ ಎಂದರು.

ಕಲಬುರ್ಗಿ ಪಾಲಿಕೆ ಸದಸ್ಯರ ಭೇಟಿ

ಕಲಬುರಗಿ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ಸದಸ್ಯರು ಮತ್ತು ವಾಡಿ ಪಟ್ಟಣ ಪಂಚಾಯತ್ ಸದಸ್ಯರು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಅವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಮೇಕೆದಾಟು ಹೋರಾಟ ಸಮಿತಿ ಭೇಟಿ
ಮೇಕೆದಾಟು ಹೋರಾಟ ಸಮಿತಿ ಪ್ರತಿನಿಧಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಭೇಟಿ ಮಾಡಿ, ಅಣೆಕಟ್ಟು ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಇದೇ ಸೆ. 23ರಂದು ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಹಮ್ಮಿಕೊಂಡಿರುವ ಆರು ಜಿಲ್ಲೆಗಳ ರೈತರ ಪಾದಯಾತ್ರೆ ಸಂಬಂಧ ಮನವಿ ಪತ್ರ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಸಂಪತ್ ಕುಮಾರ್, ನಾರಾಯಣಸ್ವಾಮಿ, ಕಲ್ಪನಾ ಶಿವಣ್ಣ, ಮಧುಸೂದನ್ ಮತ್ತಿತರರು ಇದ್ದರು.

ಕೂಡು ಒಕ್ಕಲಿಗ ಸಮುದಾಯ ಭೇಟಿ
ಕೂಡು ಒಕ್ಕಲಿಗ ಸಮುದಾಯದ ಮುಖಂಡರು ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ, ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಉಪಾಧ್ಯಕ್ಷ ಶಿವರಾಜ್ ಪಾಟೀಲ್, ಕಲಬುರಗಿ ಜಿಲ್ಲಾಧ್ಯಕ್ಷ ಶಿವಯೋಗಪ್ಪ ಚಿತ್ತಾಪುರ್, ಉಪಾಧ್ಯಕ್ಷ ಮಲ್ಲಣ್ಣಗೌಡ ಪಾಟೀಲ್, ಬಳ್ಳಾರಿ ಜಿಲ್ಲಾಧ್ಯಕ್ಷ ಸಾಗರ್ ಗೌಡ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ:ಬಿಜೆಪಿಗೆ ಗೆಲ್ಲುವ ವಿಶ್ವಾಸ ಇದ್ದರೆ ಬಿಬಿಎಂಪಿ ಚುನಾವಣೆ ಮಾಡಲಿ : ಡಿ ಕೆ ಶಿವಕುಮಾರ್ ಸವಾಲು

ABOUT THE AUTHOR

...view details