ಕರ್ನಾಟಕ

karnataka

ಸೋನಿಯಾ ವಿರುದ್ಧ ದಾಖಲಾದ ದೂರು ಹಿಂಪಡೆಯುವಂತೆ ಸಿಎಂಗೆ ಡಿಕೆಶಿ ಪತ್ರ

By

Published : May 21, 2020, 4:39 PM IST

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ರಾಜ್ಯದಲ್ಲಿ ರಾಜಕೀಯ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಇದರ ವಿರುದ್ಧ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

DK shivakumar write letter to CM withdraw complaint against Sonia
ರಾಜಕೀಯ ಪ್ರೇರಿತವಾಗಿ ಸೋನಿಯಾ ವಿರುದ್ಧ ದಾಖಲಾದ ದೂರು, ಹಿಂಪಡೆಯುವಂತೆ ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧ ರಾಜ್ಯದಲ್ಲಿ ರಾಜಕೀಯ ಪ್ರೇರಿತವಾಗಿ ದೂರು ದಾಖಲಿಸಲಾಗಿದ್ದು, ಇದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಸಿಎಂಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ಸೋನಿಯಾ ವಿರುದ್ಧ ದಾಖಲಾದ ದೂರು ಹಿಂಪಡೆಯುವಂತೆ ಸಿಎಂಗೆ ಡಿಕೆಶಿ ಪತ್ರ

ಇಂದು ಮುಖ್ಯಮಂತ್ರಿ ಅವರನ್ನು ಉದ್ದೇಶಿಸಿ ಡಿಕೆಶಿ ಪತ್ರ ಬರೆದಿದ್ದು, ಅದರಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ವೃತ್ತಿಯಲ್ಲಿ ವಕೀಲರಾದ ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ದೂರುದಾರರು ಈ ದೂರನ್ನು ರಾಜಕೀಯ ಉದ್ದೇಶದಿಂದ ಸುಳ್ಳು ಮಾಹಿತಿಯ ಮೇರೆಗೆ ಸಲ್ಲಿಸಿದ್ದಾರೆ. ಕೊರೊನಾ ಪರಿಹಾರ ನಿಧಿಯನ್ನು ಪ್ರಧಾನಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದರು. ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಜನರ ಕಲ್ಯಾಣಕ್ಕಾಗಿ ಈ ನಿಧಿಯನ್ನು ಬಳಸುವಂತೆ ಪ್ರಧಾನಮಂತ್ರಿಯನ್ನು ಒತ್ತಾಯಿಸುವ ಉದ್ದೇಶದಿಂದ ಟ್ವೀಟ್ ಮಾಡಿದ್ದರು. ದುರದೃಷ್ಟವಶಾತ್, ಇದನ್ನು ಬಿಜೆಪಿ ನಾಯಕತ್ವವು ತಪ್ಪಾಗಿ ಅರ್ಥೈಸಿತು. ಅಲ್ಲದೆ ವಕೀಲ ಪ್ರವೀಣ್ ಕುಮಾರ್ ಅವರನ್ನು ಪ್ರೇರೇಪಿಸಿ ಸೋನಿಯಾಗಾಂಧಿ ವಿರುದ್ಧ ದೂರು ದಾಖಲಿಸುವಂತೆ ಮಾಡಲಾಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ, ಟ್ವೀಟ್​ನ ಸತ್ಯಾಸತ್ಯತೆಯನ್ನು ಪರಿಶೀಲಿಸದೇ ಸುಳ್ಳು ಮಾಹಿತಿಯ ಆಧಾರದ ಮೇಲೆ ಸಾಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಗ್ಯಕರ ಟೀಕೆಗಳ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶದಿಂದ ಕಾನೂನಿನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಆದ್ದರಿಂದ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ದೂರನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ನಾವು ನಿಮ್ಮಿಂದಲೇ ಒತ್ತಾಯಿಸುತ್ತೇವೆ. ನ್ಯಾಯ ಮತ್ತು ಸಮಾನತೆಯ ದೃಷ್ಟಿಯಿಂದ ಈ ಮನವಿ ಮಾಡುತ್ತಿದ್ದು, ಇದನ್ನು ಸರ್ಕಾರ ಪುರಸ್ಕರಿಸಿದೆ ಎಂಬ ವಿಶ್ವಾಸವಿದೆ ಎಂದು ಡಿಕೆಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ABOUT THE AUTHOR

...view details