ಕರ್ನಾಟಕ

karnataka

ETV Bharat / city

ಡಿ.ಕೆ. ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ: ಜಿ. ಪರಮೇಶ್ವರ್ - ಡಿ.ಕೆ.ಶಿವಕುಮಾರ್ ಬಂಧನ

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ನಡೆಯುತ್ತಿರುವ ಬೆಳಗವಣಿಗಳನ್ನು ಗಮನಿಸಿದರೆ ರಾಜಕೀಯ ಪ್ರೇರಿತ ಎನಿಸುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

DK Shivakumar's arrest is politically motivated

By

Published : Sep 6, 2019, 10:06 PM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ನಡೆಯುತ್ತಿರುವ ಬೆಳಗವಣಿಗಳನ್ನು ಗಮನಿಸಿದರೆ ರಾಜಕೀಯ ಪ್ರೇರಿತ ಎನಿಸುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿ ಶಿವಕುಮಾರ್ ಪತ್ನಿ ಉಷಾ ಹಾಗೂ ಮಕ್ಕಳಿಗೆ ಧೈರ್ಯ ತುಂಬಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ಅಧಿಕಾರಿಗಳ ತನಿಖೆಗೆ ಡಿ.ಕೆ.ಶಿವಕುಮಾರ್ ಸಹಕರಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಸಲಿ. ಅದಕ್ಕೆ ಆಕ್ಷೇಪ ಇಲ್ಲ. ಆದರೆ, ಇದರಲ್ಲಿರಾಜಕೀಯ ವೈಷಮ್ಯ ಹೆಚ್ಚಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಬೆಂಗಳೂರು ಕಾಂಗ್ರೆಸ್​ ಶಾಸಕರಿಗೆ ಆಹ್ವಾನ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಕರೆದು ಸಭೆ ಮಾಡುತ್ತಿದ್ದೆವು. ಬೆಂಗಳೂರಲ್ಲಿ ಅನರ್ಹರು ಸೇರಿ ಕಾಂಗ್ರೆಸ್ ನ 15 ಜನ ಶಾಸಕರು ಇದ್ದಾರೆ. ರಾಜ್ಯಸಭಾ ಸದಸ್ಯರು ಸಹ ಇದ್ದಾರೆ. ಹೀಗಾಗಿ ಎಲ್ಲರನ್ನು ಸಭೆಗೆ ಕರೆಯಬೇಕು ಎಂದರು.

ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಬಗ್ಗೆ ತನಿಖೆಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಯಾರು ತಪ್ಪು ಮಾಡಿದ್ದಾರೋ ತನಿಖೆಯಿಂದ ಗೊತ್ತಾಗಲಿ. ಆದರೆ, ತನಿಖೆ ಹೆಸರಲ್ಲಿ ಅಭಿವೃದ್ಧಿ ಕಾಮಗಾರಿ ನಿಲ್ಲಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details