ಬೆಂಗಳೂರು:ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆ ಕುಸಿದಿದ್ದರೂ ಅದರ ಲಾಭವನ್ನ ಗ್ರಾಹಕರಿಗೆ ನೀಡದೆ, ಕೇಂದ್ರ ಸರ್ಕಾರ ಗ್ರಾಹಕರ ಕಣ್ಣಿಗೆ ಬೂದಿ ಎರಚಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.
ಇಂಧನ ಬೆಲೆ ಏರಿಕೆ ಮೂಲಕ ಗ್ರಾಹಕರ ಕಣ್ಣಿಗೆ ಬೂದಿ: ಡಿ.ಕೆ.ಸುರೇಶ್ ಕೆಂಡಾಮಂಡಲ - ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ಬೆಲೆ ತೀವ್ರ ಪ್ರಮಾಣದಲ್ಲಿ ಕುಸಿದಿದೆ. 30 ವರ್ಷದ ಹಿಂದೆಯಿದ್ದ ಬೆಲೆಯಗೆ ಕಚ್ಚಾ ತೈಲದ ಬೆಲೆ ಇಳಿದಿದೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ದರವನ್ನು 10 ರೂ. ಮತ್ತು ಡೀಸೆಲ್ ದರ 13 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಕಣ್ಣಿಗೆ ಬೂದಿ ಎರಚುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ಹೊಸ ಜಾರಿಗೊಳಿಸಿ, ನೋಟಿಫಿಕೇಶನ್ ಬಿಡುಗಡೆ ಮಾಡುವ ಕಾರ್ಯ ಕೇಂದ್ರ ಸರ್ಕಾರ ಮಾಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ಬೆಲೆ ತೀವ್ರ ಪ್ರಮಾಣದಲ್ಲಿ ಕುಸಿದಿದೆ. 30 ವರ್ಷದ ಹಿಂದೆಯಿದ್ದ ಬೆಲೆಯಗೆ ಕಚ್ಚಾ ತೈಲದ ಬೆಲೆ ಇಳಿದಿದೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ದರವನ್ನು 10 ರೂ. ಮತ್ತು ಡೀಸೆಲ್ ದರ 13 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಕಣ್ಣಿಗೆ ಬೂದಿ ಎರಚುತ್ತಿದೆ.
ಕೇಂದ್ರ ಸರ್ಕಾರದ ಈ ಕ್ರಮ ನನಗೆ ಅಚ್ಚರಿ ತಂದಿದೆ. ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಜನ ಮನೆಯಲ್ಲಿ ಕುಳಿತಿದ್ದಾರೆ. ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇವರಿಗೆ ಪರಿಹಾರವನ್ನು ನೀಡುವ ಬದಲು ಆರ್ಥಿಕ ಹೊರೆ ಹೊರಿಸಿದೆ. ಕೇಂದ್ರದ ನೇರ ದೌರ್ಜನ್ಯ ಹಾಗೂ ದಬ್ಬಾಳಿಕೆ ಕ್ರಮ ಇದಾಗಿದೆ. ದೇಶದಲ್ಲಿ ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಾಕಷ್ಟು ಸಬ್ಸಿಡಿಗಳನ್ನ ನೀಡಲಾಗಿತ್ತು. ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರ ಸಹಕಾರಕ್ಕೆ ಮುಂದಾಗಬೇಕು. ಅಲ್ಲದೆ,ದರ ಇಳಿಕೆ ಬಗ್ಗೆ ರಾಜ್ಯದ ಎಲ್ಲ ಸಂಸದರು ನಮ್ಮೊಂದಿಗೆ ಕೈಜೋಡಿಸಿ,ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ.