ಬೆಂಗಳೂರು:ಪಿಜಿ ನಿವಾಸಿಗಳನ್ನ ಒತ್ತಾಯ ಪೂರ್ವಕವಾಗಿ ಖಾಲಿ ಮಾಡಲು ಒತ್ತಾಯಿಸದಂತೆ ಪಿಜಿ ಮಾಲೀಕರಿಗೆ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಒತ್ತಾಯ ಪೂರ್ವಕವಾಗಿ ಖಾಲಿ ಮಾಡಿಸಬೇಡಿ: ಪಿಜಿ ಮಾಲೀಕರಿಗೆ ಬಿಬಿಎಂಪಿ ಎಚ್ಚರಿಕೆ - ಬೆಂಗಳೂರು ಸುದ್ದಿ
ಪಿಜಿ ನಿವಾಸಿಗಳನ್ನ ಒತ್ತಾಯ ಪೂರ್ವಕವಾಗಿ ಖಾಲಿ ಮಾಡಲು ಒತ್ತಾಯಿಸದಂತೆ ಪಿಜಿ ಮಾಲೀಕರಿಗೆ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿ ಕೋವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ, ಪಿಜಿ ಮತ್ತು ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳಿಗೆ ತಮ್ಮ ತಮ್ಮ ಊರುಗಳಿಗೆ ತೆರಳುವಂತೆ ಸಲಹೆ ನೀಡಿತ್ತು. ಆದರೆ, ಇದನ್ನು ಪಿಜಿ ಮಾಲೀಕರು ತಪ್ಪಾಗಿ ಅರ್ಥೈಸಿಕೊಂಡು ಪಿಜಿ ನಿವಾಸಿಗಳನ್ನ ಒತ್ತಾಯ ಪೂರ್ವಕವಾಗಿ ಖಾಲಿ ಮಾಡಿಸುತ್ತಿದ್ದಾರೆ. ಹೀಗೆ ಮಾಡದಂತೆ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಪಿಜಿ, ಹಾಸ್ಟೆಲ್ಗಳ ನೈರ್ಮಲ್ಯಗಳನ್ನು ಕಾಪಾಡಿಕೊಳ್ಳಬೇಕು. ಒಂದು ಕೋಣೆಯಲ್ಲಿ ಇಬ್ಬರನ್ನು ಮಾತ್ರ ವಾಸಿಸಲು ಅನುವು ಮಾಡಬೇಕು. ಸುರಕ್ಷತೆ, ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.