ಕರ್ನಾಟಕ

karnataka

By

Published : Aug 20, 2020, 8:12 PM IST

ETV Bharat / city

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಪಾಡ್​ ಉದ್ಘಾಟಿಸಿದ ಸಚಿವ ಡಾ.ಕೆ.ಸುಧಾಕರ್

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್​ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್​ಕೇರ್ ಪಾಡ್ಗೆ ಅನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.

Dr. K. Sudhakar  Inaugurate of the Artificial Intelligence Technology Pod
ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಪಾಡ್​ ಉದ್ಘಾಟಿಸಿದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್​ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್​ಕೇರ್ ಪಾಡ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ.

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಪಾಡ್​ ಉದ್ಘಾಟಿಸಿದ ಸಚಿವ ಡಾ.ಕೆ.ಸುಧಾಕರ್

ನಂತರ ಮಾತನಾಡಿದ ಸಚಿವರು, ಈ ಪಾಡ್​ಗಳು ಚಲಿಸುವ ಆಸ್ಪತ್ರೆಯಂತಿದ್ದು, ಎಲ್ಲಿ ಬೇಕಾದರೂ ಅಳವಡಿಸಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಒಳಗೊಂಡಿರುವ ಈ ವ್ಯವಸ್ಥೆಯಿಂದ ರೋಗ ಹರಡುವಿಕೆಯನ್ನು ತಡೆಗಟ್ಟಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯನ್ನೇ ತರಬಹುದು. ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಜನರಿಗೆ ಸೌಲಭ್ಯಗಳನ್ನು ಮಾಡಿಕೊಡುವ ಪ್ರಯತ್ನ ಮಾಡಬೇಕು ಎಂದರು.

ಒಂದು ಪಾಡ್​ನಲ್ಲಿ 4 ರಿಂದ 9 ಹಾಸಿಗೆಗಳಿರುತ್ತವೆ. ಈ ಪಾಡ್​ಗಳನ್ನು ಅಳವಡಿಸಲು 500 ಚದರ ಅಡಿ ಜಾಗ ಬೇಕಾಗುತ್ತದೆ. ಇವುಗಳನ್ನು ಆಸ್ಪತ್ರೆ, ಪಾರ್ಕಿಂಗ್ ಅಥವಾ ಯಾವುದೇ ಸುರಕ್ಷಿತವಾದ ಜಾಗದಲ್ಲಿ ಅಳವಡಿಸಬಹುದಾಗಿದೆ.

ABOUT THE AUTHOR

...view details