ಬೆಂಗಳೂರು: ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 45ನೇ ದಿನಕ್ಕೆ ಕಾಲಿಟ್ಟಿದೆ.
ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ: 45ನೇ ದಿನವೂ ಮುಂದುವರೆದ ಧರಣಿ - ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ
ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 45ನೇ ದಿನಕ್ಕೆ ಕಾಲಿಟ್ಟಿದೆ.
45ನೇ ದಿನ ತಲುಪಿದ ಸರೋಜಿನಿ ಮಹಿಷಿ ಪರಿಷ್ಕೃತ ವರದಿ, ಜಾರಿ ಪ್ರತಿಭಟನೆ
ಮೌರ್ಯ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆಗೆ ಇದುವರೆಗೂ ಯಾವುದೇ ಫಲ ಕಂಡಿಲ್ಲ. 45ನೇ ದಿನದ ಹೋರಾಟ ಇಂದು ಕೂಡ ಮುಂದುವರೆದಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಧರಣಿನಿರತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ತಮ್ಮ ಕಾರ್ಯಕರ್ತರ ಜೊತೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮನೋಹರ್ ಕೂಡ ಇಂದು ಧರಣಿಯಲ್ಲಿ ಪಾಲ್ಗೊಂಡರು. ಹೋರಾಟಗಾರರ ಜೊತೆ ಕುಳಿತು ಘೋಷಣೆ ಕೂಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿದರು.