ಕರ್ನಾಟಕ

karnataka

ಬಿಸಿ, ಪೌಷ್ಟಿಕ ಆಹಾರ ಎಲ್ಲರಿಗೂ ಲಭ್ಯವಿರುವಂತೆ ಸರಕಾರ ಚಿಂತಿಸಲಿ: ತೇಜಸ್ವಿನಿ ಅನಂತಕುಮಾರ್‌

By

Published : Jun 7, 2021, 10:24 AM IST

ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಯಾ ಪ್ರದೇಶದ ಜನಸಂಖ್ಯೆಯ ಆಧಾರದ ಮೇಲೆ ಕಮ್ಯೂನಿಟಿ ಕಿಚನ್‌ಗಳನ್ನು ಪ್ರಾರಂಭಿಸಬೇಕು. ಪೌಷ್ಟಿಕತೆ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಬಿಸಿ ಮತ್ತು ಪೌಷ್ಟಿಕ ಆಹಾರ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ದೊರಕಿಸಬೇಕು ಎಂದು ಅದಮ್ಯ ಫೌಂಡೇಶನ್​ ತಿಳಿಸಿದೆ.

webinar
ವೆಬಿನಾರ್​

ಬೆಂಗಳೂರು: ಬಿಸಿ ಮತ್ತು ಪೌಷ್ಟಿಕ ಆಹಾರ ಎಲ್ಲರಿಗೂ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 5 ನೇ ದೇಶ ಮೊದಲು – ಹಸಿವನ್ನು ಮೀರಿದ ಪೌಷ್ಠಿಕತೆ – ದೇಶದಲ್ಲಿ ಹೆಚ್ಚುವರಿ ಆಹಾರ ಮತ್ತು ಕಡಿಮೆ ಪೌಷ್ಟಿಕತೆಯ ಒಗಟು ವೆಬಿನಾರ್​ನಲ್ಲಿ ಅವರು ಮಾತನಾಡಿದರು.

ಪೌಷ್ಟಿಕತೆಯ ಸೂಚ್ಯಂಕದಲ್ಲಿ ಭಾರತ ದೇಶದ ಸ್ಥಾನ ಬಹಳ ಕೆಳಗಿನದ್ದಾಗಿದೆ. ಹಾಗಂತ ನಮ್ಮ ದೇಶದಲ್ಲಿ ಆಹಾರ ಉತ್ಪಾದನೆಯ ಪ್ರಮಾಣ ಕಡಿಮೆಯದ್ದು ಎಂದು ಅರ್ಥವಲ್ಲ. ನಾವು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚು ಆಹಾರ ಉತ್ಪಾದನೆ ಮಾಡುವ ರಾಷ್ಟ್ರವಾಗಿದ್ದೇವೆ. ಆದರೆ, ನಮ್ಮಲ್ಲಿ ಶೇಕಡಾ 40ರಷ್ಟು ಆಹಾರ ಹಾಳಾಗುತ್ತಿದೆ. ಕೆಲವೆಡೆ ಆಹಾರ ಹಾಳಾದರೆ, ಕೆಲವೆಡೆ ಆಹಾರ ಸಿಗುತ್ತಿಲ್ಲ. ಈ ಅಂತರವನ್ನು ಕಡಿಮೆ ಮಾಡಬೇಕು ಎಂದರು.

ಇದನ್ನೂ ಓದಿ:ರೈತ ಆರೋಗ್ಯ ಸಂಜೀವಿನಿ ಆ್ಯಂಬುಲೆನ್ಸ್​ಗೆ ಡಿ.ಕೆ.ಶಿವಕುಮಾರ್ ಚಾಲನೆ

ಇದೇ ವೇಳೆ, ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಪೌಷ್ಟಿಕ ಮತ್ತು ಸಾತ್ವಿಕ ಆಹಾರ ಆಂದೋಲನಕ್ಕೆ ಚಾಲನೆ ನೀಡಲಾಯಿತು. 1000 ರೂಪಾಯಿಗಳನ್ನು ನೀಡಿ ಸದಸ್ಯರಾದವರಿಗೆ ನಮ್ಮ ಪ್ರಾಚೀನ ಆಹಾರ ಧಾನ್ಯಗಳನ್ನು ಒಳಗೊಂಡಂತಹ ಕಿಟ್​ನ್ನು ನೀಡಲಾಗುತ್ತದೆ. ಇದು ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ ಎಂದು ಹೇಳಿದರು.

ಇದನ್ನೂ ಓದಿ:ಆಲ್ಕೋಹಾಲ್ ಜನರಿಗೆ 'ಟಾನಿಕ್‌'ನಂತೆ ಕಾಣುತ್ತಿದೆ: ಚರ್ಚೆಗೆ ಗ್ರಾಸವಾದ ಕೇಂದ್ರ ಸಚಿವರ ಹೇಳಿಕೆ

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಪಿ.ವಿ ಕೃಷ್ಣ ಭಟ್‌, ಡಾ.ಬಿ.ಎಸ್‌ ಶ್ರೀನಾಥ್‌, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಇದನ್ನೂ ಓದಿ:ಬೆಳೆದ ಬೆಳೆಗಿಲ್ಲ ಬಿಡಿಗಾಸಿನ ಕಿಮ್ಮತ್ತು: ಸಂಕಷ್ಟದಲ್ಲಿ ರೈತ ಸಮೂಹ

ABOUT THE AUTHOR

...view details