ಬೆಂಗಳೂರು :ಮಕ್ಕಳನ್ನು ದತ್ತು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದ ಅನ್ವಯ ಕರಡು ನಿಯಮಗಳನ್ನು ಸಿದ್ದಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಕುರಿತು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿದರು.
ಮಕ್ಕಳನ್ನು ದತ್ತುಪಡೆಯುವ ಸಂಬಂಧ ನಿಯಮಗಳನ್ನು ರೂಪಿಸುವಂತೆ ಹೈಕೋರ್ಟ್ 2021ರ ಆಗಸ್ಟ್ 19ರಂದು ನಿರ್ದೇಶಿಸಿತ್ತು. ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 11ರ ಅಡಿ ನಿಯಮಗಳನ್ನು ರೂಪಿಸುವಂತೆ ತಿಳಿಸಿತ್ತು.
ಕೋರ್ಟ್ ನಿರ್ದೇಶನದಂತೆ ಸರ್ಕಾರ ಕರಡು ನಿಯಮಗಳನ್ನು ರೂಪಿಸಿದೆ. ಅವುಗಳನ್ನು ಸಚಿವ ಸಂಪುಟದ ಮುಂದೆ ಇಟ್ಟು ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.