ಕರ್ನಾಟಕ

karnataka

ETV Bharat / city

ಡಾರ್ಕ್ ವೆಬ್ ಮೂಲಕ ಡ್ರಗ್ ಖರೀದಿ: ಆರೋಪಿಗಳಿಗೆ ಕೋರ್ಟ್ ಜಾಮೀನು - ಡಾರ್ಕ್ ವೆಬ್ ಮೂಲಕ ಡ್ರಗ್ ಖರೀದಿಸಿದ ಆರೋಪ

ಡಾರ್ಕ್ ವೆಬ್ ಮೂಲಕ ಡ್ರಗ್ ಖರೀದಿಸಿದ ಆರೋಪದಡಿ ಬಂಧಿತರಾಗಿದ್ದ ದರ್ಶನ್ ಲಮಾಣಿ, ಸುನೀಶ್ ಹೆಗ್ಡೆ, ಪ್ರಸೀದ್ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪರಿಗೆ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.

ಜಾಮೀನು
ಜಾಮೀನು

By

Published : Dec 11, 2020, 6:12 PM IST

ಬೆಂಗಳೂರು: ಡಾರ್ಕ್ ವೆಬ್ ಮೂಲಕ ಡ್ರಗ್ ಖರೀದಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಮಂತ್ರಿ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಸೇರಿದಂತೆ ನಾಲ್ವರಿಗೆ ನಗರದ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.

ಈ ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ದರ್ಶನ್ ಲಮಾಣಿ, ಸುನೀಶ್ ಹೆಗ್ಡೆ, ಪ್ರಸೀದ್ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ವಿಚಾರಣೆ ನಡೆಸಿ ಈ ಆದೇಶ ಮಾಡಿದ್ದಾರೆ.

ಅರ್ಜಿದಾರರ ಪರ ವಕೀಲ ಡಿ.ಎಸ್.ಸುಧನ್ವ ವಾದಿಸಿ, ಪೊಲೀಸರು ಸೂಕ್ತ ಸಾಕ್ಷ್ಯಾಧಾರವಿಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ. ಆ ಬಳಿಕ, ಹೆಚ್ಚುವರಿ ಆರೋಪಗಳನ್ನು ಮಾಡಿ ಎನ್​ಡಿಪಿಎಸ್ ಸೆಕ್ಷನ್​ಗಳನ್ನು ಸೇರಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಸುಜಯ್​ಗೆ ಜಾಮೀನು ನೀಡಲಾಗಿದೆ. ಇನ್ನು ಪೊಲೀಸರು ಹೇಳುವಂತೆ ಆರೋಪಿಗಳ ನಡುವೆ ವಾಟ್ಸಾಪ್ ಚಾಟ್ ನಡೆದಿದೆ ಎಂಬ ಅಂಶವನ್ನು ಈ ಹಂತದಲ್ಲಿ ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ವಾದ ಪುರಸ್ಕರಿಸಿದ ನ್ಯಾಯಾಲಯ ನಾಲ್ವರು ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯ ನಾಶಪಡಿಸಬಾರದು. ಅನುಮತಿ ಇಲ್ಲದೇ ಕ್ಷೇತ್ರ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಿ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.

ABOUT THE AUTHOR

...view details