ಬೆಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದೇನೆ. ಇನ್ನೂ ಒಂದು ವಾರ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗಿರುವುದರಿಂದ ನಾನು ಯಾರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಎಲ್ಲರು ದಯವಿಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಹೋಂ ಕ್ವಾರಂಟೈನ್ನಿಂದಾಗಿ ಒಂದು ವಾರ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ: ಡಿಕೆಶಿ - ಅಭಿಮಾನಿಗಳಿಗೆ ಡಿಕೆ ಶಿವಕುಮಾರ ಮನವಿ
ನಮ್ಮ ನಾಯಕರು, ಕಾರ್ಯಕರ್ತರು, ರಾಜ್ಯದ ಜನರ ಪ್ರಾರ್ಥನೆ, ಹಾರೈಕೆಯಿಂದಾಗಿ ನಾನು ಚೇತರಿಸಿಕೊಂಡು ನಿನ್ನೆಯಷ್ಟೇ ಮನೆಗೆ ಬಂದಿದ್ದೇನೆ. ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗಿರುವುದರಿಂದ ನಾನು ಯಾರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಎಲ್ಲರೂ ದಯವಿಟ್ಟು ಸಹಕರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ನಮ್ಮ ನಾಯಕರು, ಕಾರ್ಯಕರ್ತರು, ರಾಜ್ಯದ ಜನರ ಪ್ರಾರ್ಥನೆ, ಹಾರೈಕೆಯಿಂದಾಗಿ ನಾನು ಚೇತರಿಸಿಕೊಂಡು ನಿನ್ನೆಯಷ್ಟೇ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ಒಂದು ವಾರಗಳ ಕಾಲ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಸದ್ಯ ನಾನು ಯಾರನ್ನೂ ಭೇಟಿ ಮಾಡಲು ಆಗುವುದಿಲ್ಲ.
ನೀವುಗಳು ಬಂದಾಗ ನಮ್ಮ ಸಿಬ್ಬಂದಿ ಭೇಟಿಗೆ ಅವಕಾಶ ನೀಡುವುದಿಲ್ಲ. ಹೀಗಾಗಿ ಮುಂದಿನ ಒಂದು ವಾರ ಯಾರೂ ಮನೆಯ ಬಳಿ ಬರಬೇಡಿ. ಈ ವಿಚಾರದಲ್ಲಿ ತಪ್ಪು ಭಾವಿಸದೆ ಸಹಕರಿಸಬೇಕಾಗಿ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ವಿಶ್ವಾಸ ನನ್ನ ಶಕ್ತಿ. ಅದಕ್ಕಾಗಿ ಕೋಟಿ ನಮಸ್ಕಾರಗಳು. ಮುಂದಿನ ಒಂದು ವಾರ ನನಗೆ ಕಾಲಾವಕಾಶ ಮಾಡಿಕೊಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.