ಬೆಂಗಳೂರು:ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿ ಪ್ರಕಟಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕಾರಣದೊಂದಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಸ್ಪಷ್ಟೀಕರಣ ನೀಡಿದ್ದಾರೆ.