ಬೆಂಗಳೂರು: 'ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೋದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ' ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಸ್ಪಷ್ಟೀಕರಣ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.