ಬೆಂಗಳೂರು:ಅಕ್ರಮ ಹಣ ವರ್ಗಾವಣೆ ಆರೋಪದಡಿ ದೇಶದ 24 ಕಡೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಪ್ರಮುಖ ನಾಯಕರ ಮನೆಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಹಣದ ಮೂಲ ಮತ್ತು ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ...ಹತ್ರಾಸ್ ಗ್ಯಾಂಗ್ರೇಪ್ ಪ್ರಕರಣ ಸಿಬಿಐಗೆ ವಹಿಸುವಂತೆ ಅರ್ಜಿ ಸಲ್ಲಿಕೆ
ದೆಹಲಿ, ಉತ್ತರ ಪ್ರದೇಶ, ಕರ್ನಾಟಕ, ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ತಮಿಳುನಾಡು, ಕೇರಳದಲ್ಲಿ ಪಿಎಫ್ಐ ನಾಯಕರ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಪಿಎಫ್ಐ ಮುಖ್ಯಸ್ಥ ಒ.ಎಂ.ಅಬ್ದುಲ್ ಸಲಾಮ್ ಅವರ ಮನೆಯಲ್ಲೂ ಅಧಿಕಾರಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ವಾಹಿದ್ ಅವರ ಮನೆಯಲ್ಲೂ ಶೋಧ ಕಾರ್ಯ ನಡೆಯುತ್ತಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪಿಎಫ್‌ಐ ಕಾರ್ಯಕರ್ತರು ಎದುರಿಸುತ್ತಿರುವ ವಿವಿಧ ಅಪರಾಧ ಆರೋಪಗಳ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಮೂಲವನ್ನು ಇಡಿ ಪರಿಶೀಲಿಸುತ್ತಿದೆ. ಅಲ್ಲದೇ, ದೇಶ-ವಿದೇಶಗಳಿಂದ ಸಂಘಟನೆಗೆ ಅನುದಾನ ಬಂದಿರುವ ಹಿನ್ನೆಲೆಯೂ ದಾಳಿಯ ಉದ್ದೇಶವಾಗಿದೆ.
ಇದನ್ನೂ ಓದಿ...ಹಥ್ರಾಸ್ ಅತ್ಯಾಚಾರ ಪ್ರಕರಣ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ
ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆ (ಸಿಎಎ) ಪ್ರತಿಭಟನೆ ಮತ್ತು ದೆಹಲಿಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದ್ದು, ಈ ದಾಳಿ ಹಿನ್ನೆಲೆಯಾಗಿದೆ. ದೊಡ್ಡ ಮಟ್ಟದಲ್ಲಿ ನಡೆಸಿದ ಪ್ರತಿಭಟನೆಗೆ ಹಣ ಎಲ್ಲಿಂದ ಬಂತು? ಹೇಗೆಲ್ಲಾ ಹಣಕಾಸಿನ ವಹಿವಾಟು ನಡೆಯಿತು? ಎಂಬುದರ ಕುರಿತು ಇಡಿ ವರದಿ ಸಿದ್ದಪಡಿಸಿತ್ತು.
ಅಲ್ಲದೇ, ಹಥ್ರಾಸ್ನಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆ ಹಿಂಸಾಚಾರಕ್ಕೆ ಸಂಚು ರೂಪಿಸಿತ್ತು ಎಂದು ಆರೋಪಿಸಿ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಈ ಸಂಸ್ಥೆ ಸ್ಕ್ಯಾನರ್ ಅಡಿಯಲ್ಲಿದೆ.