ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಐಷಾರಾಮಿ ಬಂಗಲೆ, ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿಗಳು ಸೇರಿದಂತೆ ಐದಾರು ಕಡೆಗಳಲ್ಲಿ ಬೆಳಗ್ಗೆ ಆದಾಯ ತೆರಿಗೆ ಇಲಾಖೆ(IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಅಧಿಕಾರಿಗಳು ಈಗ ನೀಡಿರುವ ಮಾಹಿತಿ ಪ್ರಕಾರ, ಜಮೀರ್ ಅಹಮದ್ ಮನೆ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ, ಅದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ದಾಳಿ ಎಂದು ತಿಳಿದುಬಂದಿದೆ.
ಐಎಂಎ ಅವ್ಯವಹಾರ ಪ್ರಕರಣದಲ್ಲಿ ಪ್ರಧಾನ ವಂಚಕ ಮನ್ಸೂರ್ ಎಂಬಾತ ಶಾಸಕ ಜಮೀರ್ ಮತ್ತು ರೋಷನ್ ಬೇಗ್ ಅವರುಗಳ ಹೆಸರುಗಳನ್ನು ಪ್ರಸ್ತಾಪಿಸಿದ್ದ. ಹಾಗಾಗಿ ಇವರಿಬ್ಬರ ಮನೆಗಳು ಹಾಗು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.