ಕರ್ನಾಟಕ

karnataka

ETV Bharat / city

ಶಿಕ್ಷಣ ಸಚಿವ ಬಿ ಸಿ ನಾಗೇಶ್​ಗೆ ಕೊರೊನಾ ದೃಢ..! - ಶಿಕ್ಷಣ ಸಚಿವರಿಗೆ ಕೊರೊನಾ

Education Minister B C Nagesh tests Covid positive: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜ್ಯದ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಅವರಿಗೂ ಸೋಂಕು ದೃಢಪಟ್ಟಿದೆ.

minister BC Nageseh Covid postive
minister BC Nageseh Covid postive

By

Published : Jan 1, 2022, 6:08 PM IST

Updated : Jan 1, 2022, 6:16 PM IST

ಬೆಂಗಳೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್-19 ಸೌಮ್ಯ ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲ ದಿನಗಳಿಂದ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ಕಾರಣ ಇದೀಗ ಮತ್ತಷ್ಟು ಆತಂಕ ಶುರುವಾಗಿದೆ.

Last Updated : Jan 1, 2022, 6:16 PM IST

ABOUT THE AUTHOR

...view details