ಕರ್ನಾಟಕ

karnataka

ETV Bharat / city

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು..ಬೆಸ್ಕಾಂ ವಿರುದ್ಧ ಜನರ ಆಕ್ರೋಶ - electric shock , youth died in banglore

ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸಕೋಟೆ ಮೂಲದ ಕಿಶೋರ್(27) ಎಂದು ಗುರುತಿಸಲಾಗಿದೆ.

electric-shock-youth-died-in-banglore
ಬೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿಗೆ ಯುವಕ ಬಲಿ

By

Published : Apr 26, 2022, 1:55 PM IST

Updated : Apr 26, 2022, 7:55 PM IST

ಬೆಂಗಳೂರು: ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸಕೋಟೆ ಮೂಲದ ಕಿಶೋರ್(27) ಎಂದು ಗುರುತಿಸಲಾಗಿದೆ.


ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ನಿನ್ನೆ ತಡರಾತ್ರಿ ತನ್ನ ಸಹೋದರನ ಜೊತೆ ಬರುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಸದ್ಯ ಯುವಕನ ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಸಂಜಯ್ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವು ನೋವು ಸಂಭವಿಸುತ್ತಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ :ವಿಜಯನಗರದಲ್ಲಿ ಚಿರತೆ ದಾಳಿ, ಬಳ್ಳಾರಿಯಲ್ಲಿ ಸಿಡಿಲು ಬಡಿದು ಯುವಕ ಸಾವು

Last Updated : Apr 26, 2022, 7:55 PM IST

ABOUT THE AUTHOR

...view details