ಬೆಂಗಳೂರು :ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಮ್ಯಾನೇಜರ್ ಒತ್ತಡ ತಾಳಲಾರದೇ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಜಂ ಎಂದು ಗುರುತಿಸಲಾಗಿದೆ.
ಕೋರಮಂಗಲದ ವೇಕ್ ಫಿಟ್ ಇನೋವೇಷನ್ ಹೆಸರಿನ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆರೋಪಿ ಕಂಪನಿಯಲ್ಲಿ ಮ್ಯಾನೇಜರ್ ಕಡೆಯಿಂದ ಕೆಲಸದ ಒತ್ತಡ ಜಾಸ್ತಿ ಎಂದು ಬೇಸತ್ತಿದ್ದ.
ಮ್ಯಾನೇಜರಿಗೆ ಬುದ್ಧಿ ಕಲಿಸಲು ಮೇ 25ರಂದು ತನಗೆ ಪರಿಚಿತ ಇಬ್ಬರು ಅಪ್ರಾಪ್ತ ಬಾಲಕರ ಮೂಲಕ ಕಂಪನಿಯ 8 ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದ. ಕೋರಮಂಗಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೋರಮಂಗಲ ಠಾಣಾ ಪೊಲೀಸರು 2 ಲಕ್ಷ ಮೌಲ್ಯದ 8 ಲ್ಯಾಪ್‌ಟಾಪ್ ಮತ್ತು ಒಂದು ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಮೂರು ದಿನ ಮುಂಚಿತವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮಾನ್ಸೂನ್