ಕರ್ನಾಟಕ

karnataka

ETV Bharat / city

ಸಂಜೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ: ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ

ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಆರಂಭಗೊಳ್ಳಲಿದ್ದು, ಮಣಿಪಾಲ್ ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

all-party meeting
ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ

By

Published : Apr 20, 2021, 3:56 PM IST

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ರಾಜ್ಯಪಾಲ ವಜುಭಾಯ್ ವಾಲಾ ಇಂದು ಸರ್ವಪಕ್ಷ ಸಭೆ ಕರೆದಿದ್ದು, ಸಭೆಗೂ ಮೊದಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೆಲ ಸಚಿವರ ಜೊತೆ ಸಮಾಲೋಚನೆ ನಡೆಸಿದರು.

ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ

ಓದಿ: ಸಿಎಂ ವರ್ಕ್ ಫ್ರಂ ಹಾಸ್ಪಿಟಲ್.. ಸಚಿವರು, ಅಧಿಕಾರಿಗಳಿಗೆ ಕಾಲ ಕಾಲಕ್ಕೆ ಸೂಚನೆ

ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಆರಂಭಗೊಳ್ಳಲಿದ್ದು, ಮಣಿಪಾಲ್ ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ ಸಭೆಗೂ ಮೊದಲು ಗೃಹ ಸಚಿವ ಬಸವರಾಜ ಬೊಮ್ಮಾಯಿ,‌ ಆರೋಗ್ಯ ಸಚಿವ ಡಾ. ಸುಧಾಕರ್ ಹಾಗು ಕಂದಾಯ ಸಚಿವ ಆರ್.ಅಶೋಕ್ ಜೊತೆ ಸಿಎಂ ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ, ಲಾಕ್​ಡೌನ್ ಹೊರತುಪಡಿಸಿ ಏನೆಲ್ಲಾ ಮಾಡಬಹುದು ಎನ್ನುವ ಕುರಿತು ಸಮಾಲೋಚನೆ ನಡೆಸಿದ್ದಾರೆ. ತಜ್ಞರು ನೀಡಿರುವ ವರದಿ ಹಾಗೂ ಅವರ ಅಭಿಪ್ರಾಯದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇಂದು ಸರ್ವಪಕ್ಷ ಸಭೆಯಲ್ಲಿ ಪ್ರತಿಪಕ್ಷಗಳು ಯಾವ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲಿವೆ, ಸರ್ಕಾರದ ನಡೆ ಹೇಗಿರಬೇಕು, ರಾಜ್ಯಪಾಲರಿಗೆ ಸರ್ಕಾರದ ನಿರ್ಧಾರ ಏನು ಎನ್ನುವ ಕುರಿತು ಯಾವೆಲ್ಲಾ ಮಾಹಿತಿ ನೀಡಬೇಕು ಎನ್ನುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ವಿಶ್ರಾಂತಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಜೆ 4.30ಕ್ಕೆ ವಿಡಿಯೋ ಸಂವಾದದ ಮೂಲಕ ಭಾಗವಹಿಸಲಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 8-10 ನಗರಗಳಲ್ಲಿ ಕಠಿಣ ನಿಯಮ ಜಾರಿ ಕುರಿತು ಇಂದು ನಿರ್ಣಯ ಹೊರ ಬೀಳಲಿರುವ ಕಾರಣ ಸಭೆ ಮಹತ್ವ ಪಡೆದುಕೊಂಡಿದೆ.

ABOUT THE AUTHOR

...view details