ಬೆಂಗಳೂರು :ರಾಜ್ಯದಲ್ಲಿ ನಡೆದಿದ್ದ ಎರಡು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರ ಗೆಲುವು ಸಾಧಿಸಿರುವುಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಜತೆಗೆ ರಮೇಶ ಭೂಸನೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‌ವೈ, ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು.
ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು : ರಮೇಶ ಭೂಸನೂರ್‌ಗೆ ಬಿಎಸ್‌ವೈ ಅಭಿನಂದನೆ - ಮಾಜಿ ಸಿಎಂ ಬಿಎಸ್‌ವೈ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ..
ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು: ರಮೇಶ ಭೂಸನೂರ್‌ಗೆ ಬಿಎಸ್‌ವೈ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದಿದ್ದಾರೆ.