ಕರ್ನಾಟಕ

karnataka

ETV Bharat / city

ಸಿಲಿಂಡರ್ ಬೆಲೆ ಏರಿಕೆಗೆ ಆಕ್ರೋಶ: ಆರ್‌ಎಸ್‌ಎಸ್‌ ಈ ಬಗ್ಗೆ ದನಿ ಎತ್ತಬೇಕೆಂದ ಹೆಚ್​​ಡಿಕೆ - ಬಿಜೆಪಿ

ಸೇವೆ ಎಂದು ಸೋಗಲಾಡಿತನ ತೋರಿಸುವ ಆರ್‌ಎಸ್‌ಎಸ್‌ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

Ex CM HD Kumaraswamy unsatisfied for cylinder price rise
ಸಿಲಿಂಡರ್ ಬೆಲೆ ಏರಿಕೆಗೆ ಆಕ್ರೋಶ; ಆರ್‌ಎಸ್‌ಎಸ್‌ ದನಿ ಎತ್ತಬೇಕೆಂದ ಮಾಜಿ ಸಿಎಂ ಕುಮಾರಸ್ವಾಮಿ

By

Published : Oct 6, 2021, 6:24 PM IST

ಬೆಂಗಳೂರು: ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳ. ಈ ಸಿಲಿಂಡರ್ ಬೆಲೆ ಈಗ 900 ರೂ. ಗಡಿಯಲ್ಲಿದೆ. 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ ಎಂದು ಕಿಡಿಕಾರಿದ್ದಾರೆ.


ಕೋವಿಡ್, ಬೆಲೆ ಏರಿಕೆಯಿಂದ ಜನ ಜೀವನ ಹಳ್ಳಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಿಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತಿದೆ. ಅನಿಯಂತ್ರಿತ ಬೆಲೆ ಏರಿಕೆ ಮಾಫಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ ಎಂದಿದ್ದಾರೆ.

ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ ಆರ್‌ಎಸ್‌ಎಸ್‌ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿ ಎತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಹೇಳಿದ್ದಾರೆ.

ABOUT THE AUTHOR

...view details