ಕರ್ನಾಟಕ

karnataka

ETV Bharat / city

ಹಿಜಾಬ್ ವಿವಾದದ ತೀರ್ಪು.. ಎಂದಿನಂತೆ ನಡೆಯಲಿದೆ ಸಹಾಯಕ ಉಪನ್ಯಾಸಕರ ನೇಮಕ ಪರೀಕ್ಷೆ

ಇಂದು ಹಿಜಾಬ್ ವಿವಾದದ ತೀರ್ಪು ಪ್ರಕಟವಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ನಿಗದಿಯಂತೆ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಪರೀಕ್ಷೆ ನಿಗದಿಯಂತೆ ನಡೆಯಲಿದೆ..

Karnataka Examinations Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

By

Published : Mar 15, 2022, 7:04 AM IST

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಇಂದೂ ಕೂಡ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ.

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಿಜಾಬ್​ ವಿವಾದದ ತೀರ್ಪು ಕರ್ನಾಟಕ ಹೈಕೋರ್ಟ್​ನಿಂದ ಇಂದು ಹೊರ ಬೀಳಲಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ಪರೀಕ್ಷೆ ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಿಜಾಬ್​ ವಿವಾದದ ಬಗ್ಗೆ ಇಂದು ಮಹತ್ವದ ತೀರ್ಪು ಪ್ರಕಟಿಸಲಿರುವ ರಾಜ್ಯದ ಹೈಕೋರ್ಟ್​!

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಮಾರ್ಚ್ 12 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭವಾಗಿದ್ದು, ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ.

ABOUT THE AUTHOR

...view details