ಬೆಂಗಳೂರು: ಕೊರೊನಾ ಲಾಕ್ಡೌನ್ ಸಂಕಷ್ಟದ ನಡುವೆಯೂ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.55ರಷ್ಟು ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.
ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ. ಕಳೆದ ವರ್ಷದ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಬಾರ್ಗಳನ್ನು ಸಂಪೂರ್ಣ ಬಂದ್ ಮಾಡಿದ್ದರಿಂದ ಅಬಕಾರಿ ಆದಾಯದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡು ಬಂದಿತ್ತು. ಆದರೆ, ಈ ಬಾರಿಯ ಲಾಕ್ಡೌನ್ನಲ್ಲಿ ಸರ್ಕಾರ ಬಾರ್ಗಳಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಹಾಗಾಗಿ, ಇಲಾಖೆಯ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಮೊದಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ನಂತರ ಬೆಳಗ್ಗೆ 6 ರಿಂದ ಸಂಜೆ 5ರವರೆಗೆ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಅಬಕಾರಿ ಆದಾಯ ಹೆಚ್ಚಾಗಲು ಸಹಕಾರಿಯಾಗಿದೆ. ಸೀಮಿತ ಸಮಯವಿದ್ದರೂ ಸಹ ಮದ್ಯದ ಗಳಿಕೆಯಲ್ಲಿ ಶೇ. 55.41ರಷ್ಟು ಆದಾಯ ಹೆಚ್ಚಾಗಿದೆ.