ಬೆಂಗಳೂರು:ರಾಜ್ಯದಲ್ಲೂ ಅನ್ಲಾಕ್ 5.0 ಅನ್ವಯ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಅನ್ಲಾಕ್ನಲ್ಲಿ ಮತ್ತಷ್ಟು ತೆರವು: ಕಂಟೇನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ವಿಸ್ತರಿಸಿದ ಸರ್ಕಾರ
ಕಂಟೇನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಾಲಯದ ಆದೇಶದನ್ವಯ ಕಂಟೇನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವನ್ನು ಅನುಸರಿಸಿ ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಾಲಯವು ಇದೀಗ ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಮರು ತೆರೆಯಲು ಹಾಗೂ ಕಂಟೇನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಪೊಲೀಸ್ ಆಯುಕ್ತರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖಾ ಮುಖ್ಯಸ್ಯರುಗಳು ಮತ್ತು ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಈ ಆದೇಶವನ್ನು ಅನುಷ್ಠಾನಗೊಳಿಸಬೇಕೆಂದು ಸೂಚಿಸಲಾಗಿದೆ.