ಬೆಂಗಳೂರು: ಬಿ.ಇಡಿ ಕೋರ್ಸ್ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಬಿ.ಇಡಿ ಕೋರ್ಸ್ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ - B.Ed course
ಅಭ್ಯರ್ಥಿಗಳ ಕೋರಿಕೆಯ ಮೇರೆಗೆ 2020- 21ನೇ ಸಾಲಿನ ಬಿ.ಇಡಿ ಕೋರ್ಸ್ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
![ಬಿ.ಇಡಿ ಕೋರ್ಸ್ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ B.Ed course](https://etvbharatimages.akamaized.net/etvbharat/prod-images/768-512-10398689-thumbnail-3x2-lek.jpg)
2020- 21ನೇ ಬಿ.ಇಡಿ ಕೋರ್ಸ್ ನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಇಲಾಖೆ ವೆಬ್ಸೈಟ್ನಲ್ಲಿ ಜನವರಿ 13 ರಿಂದ 26ರ ವರೆಗೆ ಆಹ್ವಾನಿಸಲಾಗಿತ್ತು. ಆದರೆ ಹಲವಾರು ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಿಸಲಾಗಿದೆ.
ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿ ಹಾಗೂ ಇತರೆ ಸೂಚನೆಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಅದನ್ನು ಓದಿ ನಂತರ ಆನ್ಲೈನ್ ಅರ್ಜಿ ಭರ್ತಿ ಮಾಡುವಂತೆ ಸೂಚಿಸಲಾಗಿದೆ.