ಬೆಂಗಳೂರು: ಭೂ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟವು ನಗರದ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೂ ಪ್ರತಿಭಟನಾ ಜಾಥಾ ನಡೆಸಿತು. ರೈತ, ದಲಿತ, ಕಾರ್ಮಿಕರು ಸೇರಿ ರಾಜ್ಯದ ವಿವಿಧ ರೈತ ಹಾಗೂ ದಲಿತ ಸಂಘಟನೆಗಳು ಸುಗ್ರೀವಾಜ್ಞೆ ಮೂಲಕ ಜಾರಿ ತಂದಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿದವು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ - ರಾಜ್ಯ ರೈತ ಸಂಘಟನೆಗಳು
ಭೂ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನಾ ಱಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಖುರಿತು ಈಟಿವಿ ಭಾರತ್ ದೊಂದಿಗೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕರ್ನಾಟಕ ಭೂ ಸುಧಾರಣ ಕಾಯ್ದೆಯನ್ನು ಸುಗ್ರೀವಾಜ್ಞೆ ಮುಖಾಂತರ ಕಾಯ್ದೆಗೆ ಸರ್ಕಾರ ತಿದ್ದುಪಡಿ ಮೂಲಕ ಜಾರಿಗೆ ತಂದಿದೆ. ಕಾಯ್ದೆಯಲ್ಲಿನ ಕೆಲವು ಬಹುಮುಖ್ಯ ಸೆಕ್ಷನ್ಗಳನ್ನು ಕಿತ್ತು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಮೂಲಕ ರೈತರಲ್ಲದವರಿಗೂ ಕೃಷಿ ಭೂಮಿ ಕೊಳ್ಳುವ ಅವಕಾಶ ಕಲ್ಪಿಸಿದೆ. ಹೀಗಾಗಿ, ಭೂ ಮಾಫಿಯಾ ನಡೆಸುವವರಿಗೆ ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ಎಷ್ಟು ಬೇಕಾದರೂ ಭೂಮಿ ಖರೀದಿಸುವ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ಲಕ್ಷಾಂತರ ರೈತರು ಬೀದಿಗೆ ಬೀಳಲಿದ್ದಾರೆ. ಕಾಯ್ದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ಶಾಂತಕುಮಾರ್ ಎಚ್ಚರಿಕೆ ರವಾನಿಸಿದರು.